LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikmagalur

ರೆಸಾರ್ಟ್‍ನಲ್ಲಿ ಎಚ್ಡಿಕೆ ಚುನಾವಣಾ ತಂತ್ರಗಾರಿಕೆ

ಚಿಕ್ಕಮಗಳೂರು: ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧಿರಿಸಿದೆ. ವಿಶೇಷವಾಗಿ ಮಂಡ್ಯ ಕ್ಷೇತ್ರವನ್ನೇ ಪ್ರಮುಖವಾಗಿಸಿಕೊಂಡಿದೆ. ಈ ಸಂಬಂಧ ತಂತ್ರಗಾರಿಕೆ ರೂಪಿಸಲು ಚಿಕ್ಕಮಗಳೂರಿನ ರೆಸಾರ್ಟ್‍ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರು ಪಕ್ಷದ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.

ಹೆಚ್‍ಡಿ ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ತಮ್ಮ ಪಕ್ಷದ ಶಾಸಕರೊಂದಿಗೆ ಇಂದು ಮಧ್ಯಾಹ್ನ ಚಿಕ್ಕಮಗಳೂರಿಗೆ ತೆರಳಲಿದ್ದಾರೆ.
ರೆಸಾರ್ಟ್‍ನಲ್ಲಿ ಕುಳಿತು ಲೋಕಸಭಾ ಚುನಾವಣೆ ಸಂಬಂಧ ರಣತಂತ್ರ ಹೆಣೆಯಲಿದ್ದಾರೆ.

ಈ ಸಭೆಯಲ್ಲಿ ಮಂಡ್ಯ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುವ ಬಗ್ಗೆ ಚರ್ಚಿಸಲಿದ್ದಾರೆ. ಹಾಗೆ ಮಂಡ್ಯದ ರಾಜಕೀಯ ಬೆಳವಣಿಗೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಹಳೆ ಮೈಸೂರು ಭಾಗದ ಜೆಡಿಎಸ್ ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆ. ಹೀಗಾಗಿ ಹೆಚ್‍ಡಿ ಕುಮಾರಸ್ವಾಮಿ ಸಂಪೂರ್ಣ ರೆಸಾರ್ಟ್ ಬುಕ್ ಮಾಡಿದ್ದಾರೆ.

ಮೂರು ದಿನಗಳ ಸಭೆ ನಂತರ ಕೊನೆ ದಿನ ಮಾರ್ಚ್ 3 ರಂದು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಎಂಎಲ್‍ಸಿ ಭೋಜೇಗೌಡ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೆಚ್‍ಡಿ ಕುಮಾರಸ್ವಾಮಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು