LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಖುದ್ದು ಹಾಜರಿ ಕೋರಿದ್ದ 

ದರ್ಶನ್ ಅರ್ಜಿ ವಿಚಾರಣೆ ಇಂದು



ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ವಿಚಾರಣೆ ವೇಳೆ ಖುದ್ದು ಹಾಜರಾಗಲು ನಿರ್ದೇಶನ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ಸಾಕ್ಷಿಗಳ ಕ್ರಾಸ್ ಎಕ್ಸಾಮಿನೇಷನ್ (ಪಾಟಿಸವಾಲು) ಸಂದರ್ಭದಲ್ಲಿ ತಮ್ಮ ಉಪಸ್ಥಿತಿ ಅಗತ್ಯವಿರುವುದರಿಂದ ಖುದ್ದು ಹಾಜರಿಗೆ ಅವಕಾಶ ನೀಡಬೇಕು ಎಂದು ಅವರ ವಕೀಲರು ಮನವಿ ಮಾಡಿದ್ದಾರೆ.
ಈ ಮೊದಲು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ದರ್ಶನ್ ಅವರ ಖುದ್ದು ಹಾಜರಾತಿಯ ಕೋರಿಕೆಯನ್ನು ನಿರಾಕರಿಸಿತ್ತು. ಕೆಳಹಂತದ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯು ಇಂದು ಮಧ್ಯಾಹ್ನ 2:30ಕ್ಕೆ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠದಲ್ಲಿ ನಡೆಯಲಿದೆ. ವಿಚಾರಣೆ ವೇಳೆ ಪಾಟಿಸವಾಲಿಗೆ ಒಳಪಡಿಸಲಿರುವ ಮುಖ್ಯ ಸಾಕ್ಷಿಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದ್ದು, ಪ್ರಕರಣದ ಮುಂದಿನ ನಡಾವಳಿಗಳ ದೃಷ್ಟಿಯಿಂದ ದರ್ಶನ್ ಅವರ ಈ ಅರ್ಜಿ ತೀವ್ರ ಕುತೂಹಲ ಮೂಡಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST