LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಆರೋಗ್ಯ ಸಚಿವರ ಕಠಿಣ ಕ್ರಮ: ಅಂಗ ನಿರ್ಧರಣಾ ಸಮಿತಿ ಹಗರಣಕ್ಕೆ ಬ್ರೇಕ್

ಅಂಗ ನಿರ್ಧರಣಾ ಸಮಿತಿಯ ಸಲಹಾ ಗುಂಪಿನಿಂದ ನೆಪ್ರೋ ಯುರಾಲಜಿ ಸಂಸ್ಥೆಯ ಪ್ರಧ್ಯಾಪಕ ಡಾ ಸಿ.ಜಿ.ಶ್ರೀಧರ್ ಅವರ ಹೆಸರನ್ನು ಕೈಬಿಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಇಲಾಖಾ ವಿಚಾರಣೆ ಎದುರಿಸುತ್ತಿರುವ ನೆಪ್ರೋ ಯುರಾಲಜಿ ಸಂಸ್ಥೆಯ ಪ್ರಾಧ್ಯಾಪಕ ಡಾ ಶ್ರೀಧರ್ ಹೆಸರನ್ನು ಕೈಬಿಡಲು ಆದೇಶ ನೀಡಿದ್ದಾರೆ.
ಸಮಿತಿ ರಚಿಸುವ ಸಂದರ್ಭದಲ್ಲಿ ಎಲ್ಲಾ ಅನುಮೋದಿತ ಅಂಗ ಅಂಗಕಸಿ ಕೇಂದ್ರಗಳು ಮತ್ತು ತಜ್ಞ ವೈದ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆ ಸಂದರ್ಭದಲ್ಲಿ ವಿಚಾರಣೆ ಅಥವಾ ತನಿಖೆ ಎದುರಿಸುತ್ತಿರುವ ವೈದ್ಯರ ಬಗ್ಗೆ ಇಲಾಖೆಗೆ ಯಾವುದೇ ಮಾಹಿತಿ ಲಭ್ಯವಿರಲಿಲ್ಲ. ಆರೋಪಿತ ವೈದ್ಯರನ್ನು ಇನ್ಸಿ÷್ಟಟ್ಯೂಟ್ ಆಫ್ ನೆಪ್ರೋ ಯುರಾಲಜಿ ನಿರ್ದೇಶಕರ ಶಿಫಾರಸ್ಸಿನಂತೆ ಸಮಿತಿಯಲ್ಲಿ ಸೇರಿಸಿಕೊಳ್ಳಲಾಗಿತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆ ಅಂಗ ನಿರ್ಧರಣಾ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು. ಏಳು ಅಂಗಸಮಿತಿಗೆ ಸಲಹಾ ಗುಂಪು ರಚನೆ ಮಾಡಲಾಗಿತ್ತು. ಅದರಲ್ಲಿ ಮೂತ್ರ ಪಿಂಡ ಸಲಹಾ ಗುಂಪಿನಲ್ಲಿ ನೆಪ್ರೋ ಯುರಾಲಜಿ ಸಂಸ್ಥೆಯ ಪ್ರಾಧ್ಯಾಪಕ ಡಾ ಸಿ.ಜಿ.ಶ್ರೀಧರ್ ಅವರ ಹೆಸರನ್ನು ಸೇರಿಸಲಾಗಿತ್ತು. ಇವರ ವಿರುದ್ದ ವೈದ್ಯಕೀಯ ಶಿಕ್ಷಣ ಇಲಾಖೆಯ ಇಲಾಖಾ ವಿಚಾರಣೆ ನಡೆಯುತ್ತಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಸಚಿವರ ಆದೇಶದಂತೆ ಡಾ ಶ್ರೀಧರ್ ಹೆಸರನ್ನು ಕೈಬಿಡಲಾಗಿದೆ.
ಡಾ ಸಿ.ಜಿ.ಶ್ರೀಧರ್ ವಿರುದ್ಧ ಇರುವ ಆರೋಪ ಏನು?
ನೆಪ್ರೋ ಯುರಾಲಜಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ್ದ ಡಾ.ಆರ್.ಕೇಶವ್ ಮೂರ್ತಿ ಸೇರಿದಂತೆ ಈಗ ಕಾರ್ಯನಿರ್ವಹಿಸುತ್ತಿರುವ ವೈದ್ಯರಾದ ಡಾ.ಸಿ.ಜಿ.ಶ್ರೀಧರ್, ಡಾ ಪ್ರದೀಪ್, ಡಾ ಕಿಶನ್ ಹಾಗೂ ಡಾ ಶ್ರೀನಿವಾಸನ್ ವಿರುದ್ದ ಡಾ ಸುಜಾತ ಸಿದ್ದಪ್ಪ ಅವರು ೨೦೨೧ ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು. ಈ ದೂರನ್ನಾಧರಸಿ ಲೋಕಾಯುಕ್ತ ಸಂಸ್ಥೆಯು ನಾಲ್ಕು ವರ್ಷಗಳ ಕಾಲ ತನಿಖೆ ನಡೆಸಿದೆ.
ಲೋಕಾಯುಕ್ತ ತನಿಖೆಯಿಂದ ಆರೋಪಿತ ವೈದ್ಯರ ವಿರುದ್ದದ ಆರೋಪ ಸಾಬೀತಾಗಿದ್ದು, ಆ ಹಿನ್ನಲೆಯಲ್ಲಿ ಈ ವೈದ್ಯರುಗಳ ವಿರುದ್ದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಶಿಫಾರಸ್ಸು ಮಾಡಿ ಲೋಕಾಯುಕ್ತ ಸಂಸ್ಥೆಯು ನಿಯಮ೧೨(೩) ರ ಅಡಿಯಲ್ಲಿ ವಿವರವಾದ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯನ್ನು ಅಧ್ಯಯನ ಮಾಡಿದ ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಪಿತ ವೈದ್ಯರುಗಳ ವಿರುದ್ದ ಜಂಟಿ ಇಲಾಖೆ ವಿಚಾರಣೆ ನಡೆಸಿದ್ದು, ಶೀಘ್ರದಲ್ಲೆ ವಿಚಾರಣಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಈ ಕಾರಣದಿಂದ ಅಂಗನಿರ್ಧರಣಾ ಸಮಿತಿಯ ಸಲಹಾ ಗುಂಪಿನಿAದ ನೆಪ್ರೋ ಯುರಾಲಜಿ ಸಂಸ್ಥೆಯ ಪ್ರಾಧ್ಯಾಪಕ ಡಾ.ಸಿ.ಜಿ. ಶ್ರೀಧರ್ ಅವರ ಹೆಸರನ್ನು ಕೈಬಿಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು