LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮನಮುಟ್ಟುವ ಕಿರುಚಿತ್ರ "ಮಹರ್ಷಿ ವಾಲ್ಮೀಕಿ"

ರಾಮನವಮಿಯ ಸುಸಂದರ್ಭದಲ್ಲಿ ರಾಮಭಕ್ತನ ಕುರಿತಾದ ಕಿರುಚಿತ್ರದ ಅನಾವರಣ ಬೇಡನಾಗಿದ್ದ ರತ್ನಕಾರ, ಋಷಿಗಳ ಉಪದೇಶದಿಂದ ಮಹರ್ಷಿ ವಾಲ್ಮೀಕಿಯಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಕ್ರೌಂಚ ಪಕ್ಷಿಯ ಸಾವನ್ನು ಕಣ್ಣಾರೆ ಕಂಡ
ವಾಲ್ಮೀಕಿ ಮಹರ್ಷಿಗಳಿಗೆ ಆ ಘಟನೆ ರಾಮಾಯಣ ಬರೆಯಲು ಸ್ಪೂರ್ತಿಯಾಯಿತು. ಅದು ವಾಲ್ಮೀಕಿ ರಾಮಾ
ಯಣ ಎಂದೇ ಪ್ರಸಿದ್ದವಾಯಿತು. ಅಂತಹ ವಾಲ್ಮೀಕಿ ಋಷಿಗಳ ಜೀವನ ಚರಿತ್ರೆಯನ್ನು ಕಿರುಚಿತ್ರದ ಮೂಲಕ ಹೊರತಂದಿದ್ದಾರೆ ನಿರ್ದೇಶಕ ಪ್ರವೀಣ್ ಶಿವಣ್ಣ . 21 ನಿಮಿಷಗಳಲ್ಲಿ ಅದ್ಭುತವಾಗಿ ಮೂಡಿಬಂದಿರುವ ಈ ಕಿರುಚಿತ್ರಕ್ಕೆ "ಮಹರ್ಷಿ ವಾಲ್ಮೀಕಿ" ಎಂದು ಹೆಸರಿಟ್ಟಿದ್ದಾರೆ. ರತ್ನ ದಾಸ್ ಅವರ ನಿರ್ಮಾಣದ ಈ ಕಿರುಚಿತ್ರದ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನೆರವೇರಿತು. ರಾಮನವಮಿ ಸಂದರ್ಭದಲ್ಲೇ ಈ ಕಿರುಚಿತ್ರ ಅನಾವರಣವಾಗಿದ್ದು ವಿಶೇಷ. ಶ್ರೀರಿಷಿ ಅವಿರ್ಭವ ಗುರು ಪೂರ್ಣದೈತಿ, ರಾಷ್ಟ್ರಪ್ರಶಸ್ತಿ ವಿಜೇತ ಸಂಕಲನಕಾರ ಸುರೇಶ್ ಅರಸ್, ನಟ ಗಣೇಶ್ ರಾವ್ ಕೇಸರ್ಕರ್, ಪದ್ಮಶ್ರೀ ವೆಂಕಟೇಶ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪ್ರದರ್ಶನದ ನಂತರ
ತಂಡದ ಸದಸ್ಯರು ಹಾಗೂ ಗಣ್ಯರು ಮಾತನಾಡಿದರು. ನಾನು ಸಂಕಲನಕಾರನಾಗಿ ಸಾಕಷ್ಟು ಚಿತ್ರಗಳಿಗೆ ಕಾರ್ಯ ನಿರ್ವಹಿಸಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಕಿರುಚಿತ್ರ. ನಿರ್ಮಾಪಕರ, ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ "ಮಹರ್ಷಿ ವಾಲ್ಮೀಕಿ" ಕಿರುಚಿತ್ರ ಉತ್ತಮವಾಗಿ ಮೂಡಿಬಂದಿದೆ. ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಈ ಕಿರುಚಿತ್ರ ಅನಾವರಣ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದರು ನಿರ್ದೇಶಕ ಪ್ರವೀಣ್ ಶಿವಣ್ಣ.
ರಾಮ ಹದಿನಾಲ್ಕು ವರ್ಷಗಳ ವನವಾಸ ಮುಗಿಸಿ ಬಂದ ಹಾಗೆ. ನಾನು ಕೂಡ ನಟನೆ ಮಾಡಲು ಹದಿನಾಲ್ಕು ವರ್ಷಗಳು ಬೇಕಾಯಿತು. ಅದು ರಾಮಭಕ್ತ "ಮಹರ್ಷಿ ವಾಲ್ಮೀಕಿ" ಅವರ ಕಥೆಯ ಮೂಲಕವೇ ಆಗಿರುವುದು ಕಾಕತಾಳೀಯ. ನಾನು ವಾಲ್ಮೀಕಿ ಮಹರ್ಷಿಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಶಿವಮಣಿ ಅವರಂತಹ ಹಿರಿಯ ಕಲಾವಿದರ ಜೊತೆಗೆ ಅಭಿನಯಿಸಿದ್ದು ಖುಷಿಯಾಗಿದೆ ಎಂದರು ವಾಲ್ಮೀಕಿ ಪಾತ್ರಧಾರಿ ಸುಜಿತ್ ಶೆಟ್ಟಿ.ಇಂತಹ ಕಿರುಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ನಟಿ ರೂಪ ಮುತ್ತುರಾಯಪ್ಪ ಸಂತಸಪಟ್ಟರು. ಆಗಮಿಸಿದ ಗಣ್ಯರಿಗೆ ಹಾಗೂ ತಂಡದ ಸದಸ್ಯರಿಗೆ ನಿರ್ಮಾಪಕಿ ರತ್ನ ದಾಸ್ ಧನ್ಯವಾದ ಹೇಳಿದರು. ಛಾಯಾಗ್ರಾಹಕ ತನ್ವಿಕ್ ಹಾಗೂ ಸಂಗೀತ ನಿರ್ದೇಶಕ ರಾಮಾನುಜನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು