LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Udupi

ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೇ ಮಾದರಿ: ಹೆಬ್ಬಾಳ್ಕರ್

ಉಡುಪಿ : ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿ. ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ವಿದೇಶಿಯರಿಗೆ ಭಾರತೀಯ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಗುರುವಾರ ನಡೆದ ಶ್ರೀ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಉಡುಪಿ ಪರ್ಯಾಯ ಕಾರ್ಯಕ್ರಮ ನೋಡಿ ನಿಜಕ್ಕೂ ಬೆರಗಾದೆ. ಸಾಂಸ್ಕೃತಿಕವಾಗಿ ಸಾಕಷ್ಟು ಶ್ರೀಮಂತಿಕೆ ಹೊಂದಿದೆ ಎಂದರು.

ಶ್ರೀ ಪುತ್ತಿಗೆ ಪರ್ಯಾಯೋ ತ್ಸವದ ಅಂಗವಾಗಿ ನಡೆದ ಮೆರವಣಿಗೆ ಹಾಗೂ ಕಾರ್ಯ ಕ್ರಮವನ್ನು ನೋಡಿದರೆ, ಮೈಸೂರು ದಸರಾದ ವೈಭವ ನನಗೆ ನೆನಪಾಯಿತು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.ಇದನೆಲ್ಲಾ ನೋಡಿದರೆ ಸಾಂಸ್ಕೃತಿಕವಾಗಿ ಭಾರತ ಸಾಕಷ್ಟು ಶ್ರೀಮಂತವಾಗಿದೆ. ಭಾರತ ಸಾಂಸ್ಕೃತಿಕವಾಗಿ ವಿಶ್ವಗುರು ಆಗುವ ಪಥದತ್ತ ಸಾಗಿದೆ ಎಂದು ಸಚಿವರು ಹೇಳಿದರು.

ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಿದೆ. ಪರ್ಯಾಯ ಕಾರ್ಯಕ್ರಮ ಮುಗಿಯುವವರೆಗೂ ಜಿಲ್ಲಾಡಳಿತ ಸಂಪೂರ್ಣ ಸಹಕಾರವನ್ನು ನೀಡಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಶ್ರೀ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಪೂರ್ವ ಅವಕಾಶವನ್ನು ಮಿಸ್ ಮಾಡಬಾರದು ಎಂಬ ಕಾರಣಕ್ಕಾಗಿ ಕುಟುಂಬ ಸಮೇತ ಆಗಮಿಸಿ ಭಾಗವಹಿಸುತ್ತಿದ್ದೇನೆ ಎಂದು ಸಚಿವರು ಹೇಳಿದರು.

ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಉಡುಪಿ ಅನೇಕ ವೈಶಿಷ್ಟ್ಯಗಳಿಂದ ಕೂಡಿದೆ. ಇಂತಹ ಜಿಲ್ಲೆಗೆ ಉಸ್ತುವಾರಿ ಸಚಿವೆಯಾಗಿ ಸೇವೆ ಸಲ್ಲಿಸುವ ಸೌಭಾಗ್ಯ ನನ್ನ ಪಾಲಿಗೆ ಬಂದಿದೆ ಎಂದು ಸಚಿವರು ಹೇಳಿದರು. ಎಲ್ಲರಿಗೂ ಒಳ್ಳೆಯದಾಗಲಿ. ಕೃಷ್ಣನ ಅನುಗ್ರಹ ಎಲ್ಲರಿಗೂ ಲಭಿಸಲಿ ಎಂದು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ವೇಳೆ ಪರ್ಯಾಯ ಶ್ರೀ ಕೃಷ್ಣ ಪೂಜಾ ಕೈಂಕರ್ಯ ನೇರವೇರಿಸಲಿರುವ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಶ್ರೀ ಕೃಷ್ಣನ ಭಕ್ತರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು