LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ: ಉಮಾ

ದಾವಣಗೆರೆ: 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.

ಬುಧವಾರ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ನಡೆದ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ 6,16,353 ಖಾಸಗಿ ಹಾಗೂ ಸರ್ಕಾರಿ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಬೇಕಾಗಿದೆ. ಇದರಿಂದ ಅಪರಾಧಿಗಳು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸುವ ನಕಲಿ ನೋಂದಣಿ ಸಂಖ್ಯೆಗಳನ್ನು ತಡೆಗಟ್ಟಬಹುದು ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ ಎಂದರು.

2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲಿಕರು ಆನ್‍ಲೈನ್ ವೆಬ್‍ಸೈಟ್ www.siam.in hsrp karnataka book my hsrp ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಿಕೊಳ್ಳಬೇಕು.

ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸóರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೆ.ಎಸ್.ಆರ್.ಟಿ.ಸಿ ಡಿ.ಸಿ ಶ್ರೀನಿವಾಸ್ ಮಾತಾನಾಡಿ ದಾವಣಗೆರೆ ಘಟಕದ 56 ಕೆ.ಎಸ್.ಆರ್.ಟಿ ಸಿ ಬಸ್ಸುಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಲಾಗಿದ್ದು, ಬಾಕಿಯಿರುವ 323 ಸರ್ಕಾರಿ ಸಾರಿಗೆ ಬಸ್ಸುಗಳಿಗೆ ಶೀಘ್ರವೇ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಲು ಕ್ರಮ ವಹಿಸಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಮಾಲೀಕರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದರು.ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್‍ಕುಮಾರ್ ಸಂತೋಷ್, ಆರ್.ಟಿ.ಒ ಪ್ರಮತೇಶ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು