LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹಿರಣ್ಯ ಮಾಸ್ ಟೀಸರ್ ಹವಾ ಮ್ಯಾಸೀವ್ ಸ್ಟಾರ್ ರಾಜವರ್ಧನ್ ಭರ್ಜರಿ ಆಕ್ಷನ್

ಬಿಚ್ಚುಕತ್ತಿ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್ ಹಿರಣ್ಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಲು ಸಜ್ಜಾಗಿದ್ದಾರೆ. ಇದೀಗ ಹಿರಣ್ಯ ಸಿನಿಮಾದ ಮಾಸ್ ಟೀಸರ್ ರಿಲೀಸ್ ಆಗಿದೆ. ಭರ್ಜರಿ ಆಕ್ಷನ್ ಮೂಲಕ ರಾಜವರ್ಧನ್ ಅಬ್ಬರಿಸಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಹಿರಣ್ಯ ಟೀಸರ್ ಬಿಡುಗಡೆ ಮಾಡಲಾಯಿತು. ಲಹರಿ ಸಂಸ್ಥೆಯ ವೇಲು ರಾಜವರ್ಧನ್ ಸಿನಿಮಾಗೆ ಸಾಥ್ ಕೊಟ್ಟರು. ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಪ್ರವೀಣ್ ಅವ್ಯುಕ್ತ ಮಾತನಾಡಿ, ಮುಹೂರ್ತದಲ್ಲಿ ಹೇಳಿದ್ದೆ ಕೆಲಸ ಆದ್ಮೇಲೆ ನಿಮ್ಮ ಮುಂದೆ ಬರ್ತಿವೆ ಎಂದಿದ್ದೆ. ಕೆಲಸ ಆಗಿದೆ ಬಂದಿದ್ದೇವೆ. ಈ ಮೂವೀ ಎಂಜಾಯ್ ಮಾಡಲು ಮಾತೇ ಬರ್ತಿಲ್ಲ. ರಾಜವರ್ಧನ್ ಅವರು ರಾಣಾ ಡೆಡ್ಲಿ ಕ್ಯಾರೆಕ್ಟರ್ ಮಾಡಿದ್ದಾರೆ. ಟೆಸ್ಟ್ ಲುಕ್ ಮಾಡಿದೆವು. ಇಷ್ಟವಾಯ್ತು. ಅದ್ಭುತವಾಗಿ ಅವರು ಫರ್ಪಾಮ್ ಮಾಡಿದ್ದಾರೆ. ಇಡೀ ತಂಡದ ಬೆಂಬಲದಿಂದ ಸಿನಿಮಾ ತಯಾರಾಗಿದೆ ಎಂದು ತಿಳಿಸಿದರು.

ನಟ ರಾಜವರ್ಧನ್ ಮಾತನಾಡಿ, ಹಿರಣ್ಯ ಎರಡು ವರ್ಷದ ಹಿಂದೆ ಪ್ರವೀಣ್ ಬಂದು ಕಥೆ ಹೇಳಿದ್ದರು. ಬಿಚ್ಚುಕತ್ತಿಯಂತಹ ದೊಡ್ಡ ಸಿನಿಮಾ ಮಾಡಿದ್ದೆ. ಆ ಸಮಯದಲ್ಲಿ ಕಥೆ ಆಯ್ಕೆ ಮಾಡಿಕೊಳ್ಳುವುದು ದೊಡ್ಡ ಚಾಲೆಂಜ್. ಪ್ರವೀಣ್ ಕಥೆ ಹೇಳಿದಾಗ ಒಂದು ಪಾಯಿಂಟ್ ಇಷ್ಟು ವರ್ಷವಾಯ್ತು. ಕಿರುಚಿತ್ರ ಮಾಡಿ ನೀವು ಈ ಮಟ್ಟಕ್ಕೆ ಬಂದಿದ್ದೀರಾ ಅಂದರೆ ಅದಕ್ಕೆ ಕಾರಣ ನಿರ್ಮಾಪಕರು. ಕಥೆಯನ್ನು ನೀವು ನಂಬಿದ್ದೀರಾ. ನಿರ್ಮಾಪಕರು ನಂಬಿದ್ದೀರೆ. ಒಂದೊಳ್ಳೆ ಔಟ್ ಫುಟ್ ಬಂದಿದೆ. ಆದಷ್ಟು ಬೇಗ ಸಿನಿಮಾ ತೆರೆಗೆ ಬರಲಿದೆ ಎಂದರು.

ನಿರ್ಮಾಪಕ ವಿಜಯ್ ಗೌಡ ಮಾತನಾಡಿ, ಡೈರೆಕ್ಟರ್ ಪ್ರವೀಣ್ ನಮ್ಮನ್ನು ಅಪ್ರೋಚ್ ಆದರು. ಆ ನಂತರ ಮ್ಯಾಸೀವ್ ಸ್ಟಾರ್ ರಾಜವರ್ಧನ್ ಅವರನ್ನು ಅಪ್ರೋರ್ಚ್ ಮಾಡಿದೆವು. ಆ ನಂತರ ತಂಡ ಕಟ್ಟಿಕೊಂಡು ಸಿನಿಮಾ ಶುರು ಮಾಡಿದೆವು. ರಾಜವರ್ಧನ್ ಹಾಗೂ ಇಡೀ ತಂಡ ಬೆಂಬಲದಿಂದ ಸಿನಿಮಾ ಇಲ್ಲಿವರೆಗೆ ಬಂದಿದೆ ಎಂದು ತಿಳಿಸಿದರು.

ಹಲವು ಶಾರ್ಟ್ ಮೂವಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್ ಅವ್ರ್ಯುಕ್ತ್ ಹಿರಣ್ಯ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಸ್ಯಾಂಡಲ್‍ವುಡ್‍ಗೆ ಪರಿಚಯವಾಗುತ್ತಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್, ಅರವಿಂದ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಯುವನಟಿ ರಿಹಾನಾ ರಾಜವರ್ಧನ್ ಗೆ ಜೋಡಿಯಾಗಿ ನಟಿಸಿದ್ದಾರೆ.

ವೇದಾಸ್ ಇನ್ಫಿನಿಟಿ ಪಿಕ್ಚರ್ ಬ್ಯಾನರ್‍ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್ ಕುಮಾರ್ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ ಹಿರಣ್ಯ ಸಿನಿಮಾಕ್ಕೆ ಯೋಗೇಶ್ವರನ್ ಆರ್. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊ ಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಹಿರಣ್ಯ ಸಿನಿಮಾವನ್ನು ಆದಷ್ಟು ಬೇಗೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು