LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban | Politics News

ಘೋಷಣೆಗೂ ಮುನ್ನಾ ಕಾವೇರುತ್ತಿರುವ ಹಿರಿಯೂರು ವಿಧಾನಸಭಾ ಉಪಚುನಾವಣೆ


ಬೆಂಗಳೂರು: ಘೋಷಣೆಗೂ ಮುನ್ನವೇ ಹಿರಿಯೂರು ವಿಧಾನಸಭಾ ಉಪಚುನಾವಣೆ ಕಾವೇರುತ್ತಿದೆ. ಸಚಿವ ಡಿ.ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಹಿರಿಯೂರು ಕ್ಷೇತ್ರದ ಚುನಾವಣೆ ಕಾವು ಜೋರಾಗಿ ಏರುತ್ತಿದೆ. ಜೆಡಿಎಸ್ -ಬಿಜೆಪಿ ಮೈತ್ರಿಕೂಟದ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಸಲು ಎರಡು ಪಕಷಗಳಲ್ಲಿ ತೀವ್ರ ಪೈಪೋಟಿ ಎದುರಾಗಿದೆ. ಇತ್ತ ಕಾಂಗ್ರೆಸ್‌ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಗೊಂದಲವಿದ್ದರೂ ಚುನಾವಣೆ ತಯಾರಿಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬರದಿಂದ ನಡೆಸಲಾಗುತ್ತದೆಇಂದು ಮುಖ್ಯಮಂತ್ರಿಯವರು ಹಿರಿಯೂರಿನಲ್ಲಿ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರ ಸಮಸ್ಯೆಯನ್ನು ಆಲಿಸಲು ಮುಂದಾಗಿದ್ದಾರೆ. ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿ ಜೆಡಿಎಸ್‌ನಲ್ಲಿರುವ ಗೊಂದಲಗಳನ್ನು ನಿವಾರಿಸಿಕೊಳ್ಳಲು ಸ್ವಯಂ ರಾಜ್ಯ ನಾಯಕರೇ ಮುಂದಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಒಂದು ಹಂತದಲ್ಲಿ ಜೆಡಿಎಸ್‌ನ ಅಗ್ರ ಗಣ್ಯ ನಾಯಕ ಕೇಂದ್ರ ಸಚಿವ ಕುಮಾರಸ್ವಾಮಿಯವರೊಂದಿಗೆ ಮಾತನಾಡಿ, ತಾವು ತಮ್ಮ ಕೇಂದ್ರ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತನಾಡುವಂತೆ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಮ್ಮನ್ನ ಸಹ ಅದೇ ರೀತಿಯಲ್ಲಿ ವಿಶ್ವಾಸವಾಗಿ ಕಾಣಿರಿ ಎಂದು ಕೋರಿದ್ದಾರೆ ಎನ್ನಲಾಗುತ್ತಿದೆ. ಮೊನ್ನೆ ದೆಹಲಿಗೆ ಭೇಟಿ ನೀಡಿದ ವಿಜಯೇಂದ್ರ ಅವರು ತಮ್ಮ ಪಕ್ಷದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ. ಹಿರಿಯೂರು ಚುನಾವಣಾ ಸಂಬAಧ ಅಲ್ಲಿರುವ ಪರಿಸ್ಥಿತಿ ಅಲ್ಲಿರುವ ಪರಿಸ್ಥಿತಿ ಸಿದ್ದರಾಮ್ಯಯ ಅವರ ಪ್ರಭಾವ, ಗೊಲ್ಲ ಸಮುದಾಯದ ಮತದಾರರ ಒಲವು ನಿಲುವುಗಳ ಬಗ್ಗೆ ಕುದ್ದಾಗಿ ಚುನಾವಣೆ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. 
ಜೆಡಿಎಸ್ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿದರೆ ಯಾವ ಪರಿಣಾಮ ಬೀರುತ್ತದೆ ಎಂದಿರುವ ಅವರು ಚುನಾವಣೆಯಲ್ಲಿ ಸಾಧಕ ಬಾಧಕ ಚರ್ಚಿಸಿ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ವಿಜಯೇಂದ್ರ ಅವರ ಲೆಕ್ಕಾಚಾರವನ್ನು ಗಣನೆಗೆ ತೆಗೆದುಕೊಂಡಿರುವ ಅಮಿತ್ ಶಾ ಒಂದು ವಾರದೊಳಗಾಗಿ ಈ ಬಗ್ಗೆ ಸೂಕ್ತ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಹಿರಿಯೂರು ಉಪಚುನಾವಣೆ ಮುಂದೆ 2028ರಲ್ಲಿ ರಾಜ್ಯದಲ್ಲಿ ಎದುರಾಗುವ ಚುನಾವಣೆ ಚುನಾವಣೆ ಮೇಲೆ ಪರಿಣಾಮ ಬೀರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST