LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅಗತ್ಯವಿದ್ದರೆ ಬಿಎಸ್‍ವೈ ಬಂಧನ ಫೋಕ್ಸೋ ಪ್ರಕರಣ: ಗೃಹಸಚಿವ ಪರಮೇಶ್ವರ್ ಹೇಳಿಕೆ

ತುಮಕೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್‍ಗೆ ಉತ್ತರ ನೀಡಬೇಕಾಗುತ್ತದೆ ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್‍ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಬಿದ್ರೆ ಸಿಐಡಿಯವರು ಯಡಿಯೂರಪ್ಪರನ್ನ ಬಂಧಿಸ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದು ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದು ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ, ಅಪಾಯ ಮನಗಂಡ ಯಡಿಯೂರಪ್ಪ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್‍ಗೂ ಉತ್ತರ ನೀಡಿರುವ ಅವರು, ಜೂನ್ 17 ರಂದು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಮಾರ್ಚ್ 28 ರಂದು ನೀಡಿದ್ದ ನೋಟಿಸ್‍ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ.

ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ 17 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು