LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರವಾಸಕ್ಕೆ ತೆರಳಲು ಪತಿ ನಿರಾಕರಣೆ ಗೃಹಿಣಿ ಆತ್ಮಹತ್ಯೆ, ಕುಟುಂಬಸ್ಥರಿಂದ ಕೊಲೆ ಆರೋಪ

ಮೈಸೂರು: ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ.
ನಗರದ ಸರಸ್ವತಿಪುರಂನ ನಿವಾಸಿ ೪೬ ವರ್ಷದ ಸಂಧ್ಯಾ ಮೃತ ದುರ್ದೈವಿ. ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಮೂಲದ ಸಂಧ್ಯಾ ೨೫ ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಎಂಬವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಪುತ್ರಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಧ್ಯಾ ಮನೆಯಲ್ಲಿ ಗಂಡ ಹಾಗೂ ಮಗನ ಜೊತೆ ವಾಸವಿದ್ದರು. ನಿನ್ನೆ ರಾತ್ರಿ ಪ್ರವಾಸದ ವಿಚಾರದಲ್ಲಿ
ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಗಂಡ ಮನೆಯಿಂದ ಹೊರ ಹೋದ ನಂತರ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ.
ಆದರೆ, ತನ್ನ ಅಕ್ಕನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿರುವ ಸಹೋದರ ಗುರುಮೂರ್ತಿ, ಗಂಡ ಹಾಗೂ ಮಗನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು