LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

` ನಾನು ನಿವೃತ್ತಿ ಘೋಷಿಸಿಲ್ಲ'

ಆರು ಬಾರಿಯ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಮತ್ತು 2012 ಒಲಿಂಪಿಕ್ಸ್ ಪದಕ ವಿಜೇತೆ ಮೇರಿ ಕೋಮ್ ಅವರು ನಿವೃತ್ತಿ ಘೋಷಿಸಿದ್ದಾರೆಂಬ ವರದಿಗಳ ನಡುವೆ ಪ್ರತಿಕ್ರಿಯಿಸಿರುವ ಮೇರಿ, ಈ ವರದಿಗಳನ್ನು ನಿರಾಕರಿಸಿದ್ದಾರೆ. ಈ ಕುರಿತು ಅವರು ಹೇಳಿಕೆ ಬಿಡುಗಡೆಗೊಳಿಸಿದ್ದಾರೆ.

“ ಆತ್ಮೀಯ ಮಾಧ್ಯಮ ಮಿತ್ರರೇ, ನಾನಿನ್ನೂ ನಿವೃತ್ತಿ ಘೋಷಿಸಿಲ್ಲ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ನಿವೃತ್ತಿ ಘೋಷಿಸಬೇಕೆಂದಾಗ ನಾನು ಖುದ್ದಾಗಿ ಮಾಧ್ಯಮದ ಮುಂದೆ ಹಾಜರಾಗುತ್ತೇನೆ. ನಾನು ನಿವೃತ್ತಿ ಘೋಷಿಸಿದ್ದೇನೆಂದು ಹೇಳುವ ಕೆಲ ಮಾಧ್ಯಮ ವರದಿಗಳನ್ನು ನಾನು ನೋಡಿದ್ದೇನೆ, ಇದು ನಿಜವಲ್ಲ,” ಎಂದಿದ್ದಾರೆ.

“ಜನವರಿ 24ರಂದು ದಿಬ್ರೂಘರ್‍ನಲ್ಲಿ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸುತ್ತಿದ್ದೆ. ಕ್ರೀಡೆಯಲ್ಲಿ ಸಾಧಿಸುವ ಛಲ ಇನ್ನೂ ಇದೆ ಆದರೆ ವಯೋಮಿತಿಯು ನನಗೆ ಒಲಿಂಪಿಕ್ಸ್‍ನಲ್ಲಿ ಭಾಗವಹಿಸಲು ಅನುಮತಿಸುವುದಿಲ್ಲ. ಈಗಲೂ ಫಿಟ್ನೆಸ್ ಮೇಲೆ ಗಮನ ಹರಿಸಿದ್ದೇನೆ ಹಾಗೂ ಯಾವಾಗ ನಿವೃತ್ತಳಾಗಬಯಸುತ್ತೇನೆಯೇ ಆಗ ಎಲ್ಲರಿಗೂ ಮಾಹಿತಿ ನೀಡುತ್ತೇನೆ,” ಎಂದು ಮೇರಿ ಕೋಮ್ ಹೇಳಿದ್ದಾರೆ.

ಬಾಕ್ಸರ್‍ಗಳಿಗೆ 40 ವರ್ಷ ವಯಸ್ಸಿನ ತನಕ ಮಾತ್ರ ಉನ್ನತ ಚಾಂಪಿಯನ್‍ಶಿಪ್‍ಗಳಲ್ಲಿ ಭಾಗವಹಿಸಬಹುದೆಂಬ ಐಬಿಎ ನಿಯಮವಿರುವುದರಿಂದ ಮೇರಿ ಕೋಮ್ ನಿವೃತ್ತರಾಗಿದ್ದಾರೆಂದು ಈ ಹಿಂದೆ ಕೆಲ ವರದಿಗಳು ಹೇಳಿದ್ದವು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು