LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

"ಐಸಿಸಿ ಅಂಡರ್ ೧೯ ವಿಶ್ವಕಪ್ ೨೦೨೬ ವೇಳಾಪಟ್ಟಿ ಪ್ರಕಟ"

ಐಸಿಸಿ ಅಂಡರ್-೧೯ ಕ್ರಿಕೆಟ್ ವಿಶ್ವಕಪ್ ೨೦೨೬ ಟೂರ್ನಿಯು ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಇದೀಗ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ ೧೫ ರಿಂದ ಫೆಬ್ರವರಿ ೬ ರವರೆಗೆ ನಡೆಯಲಿದ್ದು ಒಟ್ಟು ೧೬ ತಂಡಗಳು ಭಾಗವಹಿಸಲಿವೆ. ಅವುಗಳನ್ನ ನಾಲ್ಕು ಬಣಗಳನ್ನು ವಿಂಗಡಿಸಲಾಗಿದ್ದು ಪ್ರತಿಯೊಂದು ಬಣದಲ್ಲೂ ನಾಲ್ಕು ತಂಡಗಳಿವೆ.

ಆಯುಷ್ ಮ್ಹಾತ್ರೆ ನೇತೃತ್ವದ ಭಾರತ ತಂಡ ಎ ಬಣದಲ್ಲಿ ಅಮೆರಿಕ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಜೊತೆ ಸೆಣೆಸಲಿದೆ. ಜಿಂಬಾಬ್ವೆಯ ಮೂರು ಮತ್ತು ನಮೀಬಿಯಾದ ಎರಡು ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿವೆ. ಜಿಂಬಾಬ್ವೆಯಲ್ಲಿ ಹರಾರೆ ಸ್ಪೋರ್ಟ್ಸ್ ಕ್ಲಬ್ ಮತ್ತು ತಕಾಶಿಂಗಾ ಸ್ಪೋರ್ಟ್ಸ್ ಕ್ಲಬ್ ಹರಾರೆ ಹಾಗೂ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್  ಬುಲಾವಾಯೊದಲ್ಲಿ ಪಂದ್ಯಗಳನ್ನು ಆಯೋಜಿಸಲಿವೆ. ಇನ್ನು ನಮೀಬಿಯಾದ ವಿಂಡ್ಹೋಕ್ ನಲ್ಲಿರುವ ನಮೀಬಿಯಾ ಕ್ರಿಕೆಟ್ ಗ್ರೌಂಡ್ ಮತ್ತು ಎಚ್ಪಿ ಓವಲ್ ಕ್ರೀಡಾಂಗಣಗಳು ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ. ವಿಶೇಷವೆಂದರೆ ಅಂಡರ್ ೧೯ ವಿಶ್ವಕಪ್ ಆತಿಥ್ಯ ವಹಿಸಿರುವ ಜಿಂಬಾಬ್ವೆ ಮತ್ತುನಮೀಬಿಯಾ ದೇಶಗಳು ೨೦೨೭ರ ಕ್ರಿಕೆಟ್
ವಿಶ್ವಕಪ್ ಅನ್ನು ಸಹ ದಕ್ಷಿಣ ಆಫ್ರಿಕಾದೊಂದಿಗೆ ಸೇರಿ ಆಯೋಜಿಸುತ್ತಿವೆ.

ಜನವರಿ ೧೫ರಂದು ಬುಲಾವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯರುವ ಉದ್ಘಾಟನಾ ಪಂದ್ಯದಲ್ಲಿ ಭಾರತ ತಂಡ ಅಮೆರಿಕವನ್ನು ಎದುರಿಸಲಿದೆ. ಫೈನಲ್ ಪಂದ್ಯವು ಪಂದ್ಯವು ಫೆಬ್ರವರಿ ೬ ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಲಿದೆ. ಗುಂಪು ಹಂತದ ಪಂದ್ಯಗಳ ನಂತರ, ಸೂಪರ್ ಸಿಕ್ಸ್ ಹಂತ, ನಂತರ ಸೆಮಿ-ಫೈನಲ್ ಮತ್ತು ಅಂತಿಮ ಪಂದ್ಯಗಳು ನಡೆಯಲಿವೆ. ಭಾರತದ ಅಂಡರ್ ೧೯ ತಂಡದಲ್ಲಿ ನಾಯಕ ಆಯುಷ್ ಮಾತ್ರೆ, ೧೪ ವರ್ಷದ ಬಾಲಕ ವೈಭವ್ ಸೂರ್ಯವಂಶಿ ಅವರು ಮುಖ್ಯ ಆಕರ್ಷಣೆಯಾಗಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು