LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಜಾರಿ: ಸಿಎಂ ಸಿದ್ದರಾಮಯ್ಯ

ಕೋಲಾರ/ ಬಂಗಾರಪೇಟೆ: ಕಳೆದ ಹತ್ತು ವರ್ಷಗಳ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು ಜನ ಸಾಮಾನ್ಯರು, ಕೂಲಿ ಕಾರ್ಮಿಕರು ಹಾಗೂ ದಲಿತರಿಗೆ ಅನ್ಯಾಯ ಮಾಡಿದ್ದಾರೆ. ರೈತರ ಸಾಲ ಮನ್ನ ಮಾಡಲು ಸರ್ಕಾರದಲ್ಲಿ ಹಣ ಇಲ್ಲ ಎಂದು ಹೇಳುವ ಮೋದಿ ಉದ್ದಿಮೆಗಳ ಲಕ್ಷಾಂತರ ಕೋಟಿ ಸಾಲ ಮನ್ನ ಮಾಡುತ್ತಾರೆ.

ಮೋದಿ ದೊಡ್ಡ ದೊಡ್ಡ ಉದ್ದಿಮೆಗಳ ಪರ ಕೆಲಸ ಮಾಡುತ್ತಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನ ಮಾಡಲಾಗುವುದು. ಎಂ.ಎಸ್.ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡಿ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲಾಗುವುದೆಂದು ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದರು.

ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಮುಖ್ಯಮಂತ್ರಿ ಸಿದ್ಧರಾಮಯ್ಯ ರೋಡ್ ಶೋ ನಡೆಸಿ ಮಾತನಾಡಿದರು.ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದರೆ. ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ.

ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಪ್ರಶ್ನಿಸಿದರುಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ? ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ.

ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟ ಅಲ್ವಾ ದೇವೇಗೌಡರೇ ಎಂದು ಸಿ.ಎಂ ಪ್ರಶ್ನಿಸಿದರುಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಸಿ.ಎಂ ಕರೆ ನೀಡಿದರು.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೌತಮ್ ಗೆಲುವು ನಿಶ್ಚಿತವಾಗಿದೆ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತ ನೀಡಿ ಶಾಸಕ ನಾರಾಯಣಸ್ವಾಮಿಯವರಿಗೆ ಹೆಚ್ಚಿನ ಶಕ್ತಿ ನೀಡಿರೋಡ್ ಶೋ ನಲ್ಲಿ ಚೊಂಬಿನ ಸದ್ದು ಬಂಗಾರಪೇಟೆಯಲ್ಲಿ ಸಾರ್ವಜನಿಕ ರೋಡ್ ಶೋ ನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು. ಮುಖ್ಯಮಂತ್ರಿಗಳು ಸಾರ್ವಜನಿಕರಿಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಜನತೆ ಚೊಂಬು ಚೊಂಬು ಎಂದು ಕೂಗಿದರು.
ಮೋದಿಯವರು ನಿಮ್ಮ ಅಕೌಂಟಿಗೆ 15 ಲಕ್ಷ ಹಾಕ್ತೀನಿ ಎಂದಿದ್ದರಲ್ಲಾ , ಎಷ್ಟು ಹಣ ಬಂತು ಎಂದು ಕೇಳಿದರು.

ಜನತೆ ಚೊಂಬು ಎಂದು ಕೂಗಿದರು. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದಿದ್ದರಲ್ಲಾ , ಎಷ್ಟು ಜನರಿಗೆ ನೇಮಕಾತಿ ಆದೇಶ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು. ಮೋದಿಯವರು ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರಲ್ಲಾ, ಎಷ್ಟು ರೈತರಿಗೆ ದುಪ್ಪಟ್ಟು ಹಣ ಬಂತು ಎಂದು ಕೇಳಿದರು.

ಜನತೆ ಚೊಂಬು ಎಂದು ಕೂಗಿದರು ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಕೈಗೆ ಅವರ ಖಾಲಿಚೊಂಬನ್ನು ಅವರಿಗೇ ವಾಪಾಸ್ ಕೊಡಿ ಎಂದು ಕರೆ ನೀಡಿದರು.ಕೋಲಾರದಲ್ಲಿ ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಪಾರ್ಕ್, ಟೌನ್ ಶಿಪ್ ಮಾಡುವ ಬೇಡಿಕೆ ಇದೆ. ಈ ಬಗ್ಗೆ ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು