LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

I'm god ಟೈಟಲ್ ಹಾಗೂ ಪೋಸ್ಟರ್ ರಿಲೀಸ್ ಮಾಡಿದ ಮುಖ್ಯ ಮಂತ್ರಿ

ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ನಿನ್ನೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ.

ಧ್ವಜ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದ ರವಿ ಗೌಡ I'm god ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರು ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ರವಿ ಗೌಡ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಿಸಿರುವ I'm god ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಅನಾವರಣ ಮಾಡಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸಿ ಬಸವೇಗೌಡ್ರು ಮಗ ರವಿ ಗೌಡ ಮಗ ಹುಟ್ಟುವ ಮುಂಚೆಯೇ ಬಸವೇಗೌಡ ನನಗೆ ಪರಿಚಯ. ನಾನು ಬಸವೇಗೌಡರ ಮಗ ಸಿನಿಮಾದಲ್ಲಿ ನಟಿಸುತ್ತಾನೆ. ನಿರ್ಮಾಪಕ ಆಗುತ್ತಾನೆ. ನಿರ್ದೇಶಕನಾಗುತ್ತಾನೆ ಎಂದುಕೊಂಡಿರಲಿಲ್ಲ. ಸಿನಿಮಾ ಕ್ಷೇತ್ರಗಳಲ್ಲಿ ಒಳ್ಳೆ ನಟನಾಗಿ, ನಿರ್ದೇಶಕನಾಗಿ ಮೂಡಿ ಬರಲಿ. ದುಡ್ಡಿದ್ರೆ ಯಾರು ಬೇಕಾದರೂ ನಿರ್ಮಾಪಕರು ಆಗಬಹುದು. ಆದರೆ ನಟನೆ, ನಿರ್ದೇಶಕರಾಗುವುದು ರಕ್ತದಲ್ಲಿ ಬಂದಾಗ ಮಾತ್ರ ಸಾಧ್ಯವಾಗುವುದು. ಬಸವೇಗೌಡ ಮಗ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿರುವುದು ಸಂತಸ. ಈ ಕ್ಷೇತ್ರದಲ್ಲಿ ಪ್ರಬುದ್ಧವಾಗಿ ಬೆಳೆಯಬೇಕು ಎಂದು ಆಶಿಸುತ್ತೇನೆ. ನಾನು ಸಿನಿಮಾ ನೋಡುತ್ತೇನೆ. ಸಿನಿಮಾ ಕ್ಷೇತ್ರದಲ್ಲಿ ದೊಡ್ಡದಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

I'm god ರೋಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರು ಹಾಗೂ ಕೇರಳದಲ್ಲಿ ಶೂಟಿಂಗ್ ನಡೆಸಲಾಗಿದೆ. ಸದ್ಯ ಪೋಸ್ಟ್   ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ಸಿಬಿಜಿ  ಪ್ರೊಡಕ್ಷನ್ಸ್ ನಡಿ ಮೂಡಿ ಬರ್ತಿರುವ I'm god ಚಿತ್ರಕ್ಕೆ ಕಾಂತಾರ ಮ್ಯೂಸಿಕ್ ಮಾಂತ್ರಿಕ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ರವಿ ವರ್ಮಾ ಸಾಹಸ ನಿರ್ದೇಶನ, ಜಿತಿನ್ ದಾಸ್ ಕ್ಯಾಮೆರಾ ಕೆಲಸ, ಸುರೇಶ್ ಅರುಮುಗಂ ಸಂಕಲನ ಚಿತ್ರಕ್ಕಿರಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು