LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

`ನಾನು ದಾಖಲೆಗಳಿಗಾಗಿ ಆಡುವವನಲ್ಲ’

ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ, 2023ರ ವಿಶ್ವಕಪ್ ಟೂರ್ನಿಯಲ್ಲಿ ಹಲವು ಅವಿಸ್ಮರಣೀಯ ದಾಖಲೆಗಳನ್ನು ಬರೆದಿದ್ದಾರೆ. ಅಷ್ಟೇ ಅಲ್ಲದೆ ಜಹೀರ್ ಖಾನ್ ಮತ್ತು ಜಾವಗಲ್ ಶ್ರೀನಾಥ್ ಅವರಂತಹ ದಿಗ್ಗಜರಿಗೆ ಸಡ್ಡು ಹೊಡೆದು ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡುರು.

ಜಹೀರ್ ಖಾನ್ ಮತ್ತು ಜಾವಗಲ್ ಶ್ರೀನಾಥ್ ವಿರ್ಶವಕಪ್ ಅಖಾಡದಲ್ಲಿ ತಲಾ 44 ವಿಕೆಟ್‍ಗಳನ್ನು ಪಡೆದ ದಾಖಲೆ ಹೊಂದಿದ್ದಾರೆ. ಆದರೆ, ಪ್ರಚಂಡ ಪ್ರದರ್ಶನ ನೀಡಿರುವ ಮೊಹಮ್ಮದ್ ಶಮಿ ಆಡಿದ 18 ವಿಶ್ವಕಕಪ್ ಪಂದ್ಯಗಳಲ್ಲೇ 55 ವಿಕೆಟ್‍ಗಳನ್ನು ಪಡೆಯುವ ಮೂಲಕ ಅತಿ ವೇಗವಾಗಿ ವಿಶ್ವಕಪಗ್‍ನಲ್ಲಿ ವಿಕೆಟ್‍ಗಳ ಅರ್ಧಶತಕ ಬಾರಿಸಿದ ದಾಖಲೆಯನ್ನೂ ಬರೆದಿದ್ದಾರೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅವರು ನ್ಯೂಜಿಲೆಂಡ್ ಎದುರು 57ಕ್ಕೆ 7 ವಿಕೆಟ್ ಪಡೆದ ಸಾಧನೆ ಮೆರೆದಿದ್ದರು. ಈ ಮೂಲಕ ಒಡಿಐ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ಶ್ರೇಷ್ಠ ಬೌಲಿಂಗ್ ಸಾಧನೆಯ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡು. ಇದಕ್ಕೂ ಮೊದಲು ಸ್ಟುವರ್ಟ್ ಬಿನ್ನಿ (8ಕ್ಕೆ 6) ಹೆಸರಲ್ಲಿ ಈ ದಾಖಲೆ ಇತ್ತು.

“ನಾನು ದಾಖಲೆಗಳಿಗಾಗಿ ಆಡುವವನಲ್ಲ. ಈ ದಿಗ್ಗಜ ಆಟಗಾರರನ್ನು ಹಿಂದಿಕ್ಕಿದ್ದೇನೆ ಎಂಬ ಸಂಗತಿಯೂ ನನಗೆ ತಿಳಿದಿರಲಿಲ್ಲ. ಆದರೆ ವಿಶ್ವಕಪ್‍ನಲ್ಲಿ 40ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದೇನೆ ಎಂಬುದು ನನ ಗಮನದಲ್ಲಿತ್ತು. ಆದರೆ, ವೈಯಕ್ತಿಕ ಮೈಲುಗಲ್ಲುಗಳ ಬಗ್ಗೆ ನಾನು ಎಂದಿಗೂ ಗಮನ ಕೊಟ್ಟಿರಲಿಲ್ಲ. ನನ್ನ ಕೆಲಸ ಏನಿದ್ದರೂ ಉತ್ತಮವಾಗಿ ಬೌಲಿಂಗ್ ಮಾಡುವುದಷ್ಟೇ,” ಎಂದು ಪೂಮಾ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಮೊಹಮ್ಮದ್ ಶಮಿ ತಮ್ಮನ ಮನದಾಳ ತೆರೆದಿಟ್ಟಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು