LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಹಿರಿಯರ ಅನುಕರಣೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ

ಬೆಂಗಳೂರು: ಪಕ್ಷದ ರಾಷ್ಟ್ರೀಯ ನಾಯಕರು ಬೂತ್ ಮಟ್ಟದಿಂದಲೇ ಕಾರ್ಯನಿರ್ವಹಿಸುವ ಮೂಲಕ ರಾಷ್ಟ್ರೀಯ ನಾಯಕರಾಗಿ ಪಕ್ಷವನ್ನು ಸದೃಢವಾಗಿ ಬೆಳೆಸಿದ್ದಾರೆ. ಅವರ ಹಾದಿಯಲ್ಲೇ ತಾವು ಕೂಡ ಮುಂದುವರಿಯುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಾತಿ ಆದೇಶ ಹೊರ ಬಿದ್ದ ನಂತರ ಇಂದು ಬೆಳಿಗ್ಗೆ ಮೊದಲನೆಯದಾಗಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರೆನ್ನಲಾದ ಶಶಿಧರ್ ಎಂಬುವರ ಮನೆಗೆ ಭೇಟಿ ನೀಡಿ ಸಿಹಿ ವಿನಿಯಮಯ ಮಾಡಿಕೊಂಡು ತದನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಪ್ರತಿಯೊಂದು ಬೂತ್ ಅಧ್ಯಕ್ಷರು ಕೂಡ ಪಕ್ಷದ ಜೀವಾಳ. ಪಕ್ಷದ ಎಲ್ಲ ಬೂತ್‍ಗಳನ್ನು ಬಲಪಡಿಸಲು ಆದ್ಯತೆ ನೀಡಲಾಗುವುದು. ಗಾಂಧಿನಗರ ಬೂತ್ 40ರ ಅಧ್ಯಕ್ಷ ಶಶಿಧರ್ ಅವರ ಮನೆಗೆ ಭೇಟಿ ಕೊಟ್ಟಿದ್ದೇನೆ. ದೀಪಾವಳಿ ಶುಭಾಶಯ ಕೋರಿದ್ದೇನೆ. ರಾಜ್ಯದಲ್ಲಿ 58,282 ಬೂತ್‍ಗಳು ಇವೆ. ಎಲ್ಲ ಬೂತ್‍ಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸಲಾಗುವುದು ಎಂದು ತಿಳಿಸಿದರು.

ಪ್ರತಿ ಬೂತ್ ಪ್ರಮುಖ ಪಕ್ಷದ ಜೀವಾಳ ಎಂಬುದು ಹಿಂದಿನ ರಾಷ್ಟ್ರೀಯ ಅಧ್ಯಕ್ಷರು ಮತ್ತು ಇಂದಿನ ಕೇಂದ್ರ ಗೃಹ ಸಚಿವರು ಆದ ಅಮಿತ್ ಶಾ, ಇಂದಿನ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಕಲ್ಪನೆ ಮತ್ತು ಚಿಂತನೆಯಾಗಿದೆ. ಅವರ ಚಿಂತನೆಯಂತೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ಕೊಡುವ ಮೂಲಕ ಕಾರ್ಯಾರಂಭ ಮಾಡಿದ್ದೇನೆ. ಇಡೀ ರಾಜ್ಯದಲ್ಲಿರುವ ಎಲ್ಲ 58 ಸಾವಿರಕ್ಕೂ ಹೆಚ್ಚು ಬೂತ್‍ಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಹೆಜ್ಜೆ ಇಡುವುದಾಗಿ ತಿಳಿಸಿದರು.

ಪಕ್ಷದ ರಾಷ್ಟ್ರೀಯ ನಾಯಕರು ಬೂತ್ ಅಧ್ಯಕ್ಷರಾಗಿ ಈ ಮಟ್ಟಕ್ಕೆ ಬೆಳೆದುಬಂದಿದ್ದಾರೆ. ಬಿಜೆಪಿ, ರಾಷ್ಟ್ರೀಯ ಅಧ್ಯಕ್ಷರಂತೆ ಬೂತ್ ಅಧ್ಯಕ್ಷರನ್ನೂ ಗೌರವದಿಂದ ಕಾಣುತ್ತದೆ. ಇದೇ ಬಿಜೆಪಿಯ ವಿಶೇóಷತೆ ಎಂದು ತಿಳಿಸಿದರು.ಬಿಜೆಪಿ ಕಾರ್ಯಕರ್ತರು ಹೋರಾಟದಿಂದ ಹಿಂದೆ ಸರಿದ ಉದಾಹರಣೆಗಳಿಲ್ಲ. ನಮ್ಮ ಕಾರ್ಯಕರ್ತರ ರಕ್ತದ ಕಣಕಣದಲ್ಲೂ ಹೋರಾಟದ ಗುಣವಿದೆ.

ಕಾಂಗ್ರೆಸ್ ಅಬ್ಬರವನ್ನು ಮೀರಿ ನಮ್ಮ ಪಕ್ಷದ ಕಾರ್ಯಕರ್ತರು ಸಂಘಟನೆ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲಿದ್ದೇವೆ ಎಂದು ವಿಶ್ವಾಸದಿಂದ ನುಡಿದರು.ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಮೋಹನ್, ಜಿಲ್ಲಾಧ್ಯಕ್ಷ ಮಂಜುನಾಥ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು