LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

`ಅಮರ ಶಿಲ್ಪಿ ಜಕಣಾಚಾರಿಯವರು ಶಿಲ್ಪಕಲೆಗೆ ನೀಡಿದ ಕೊಡುಗೆ ಸರ್ವ ಕಾಲಕ್ಕೂ ಶಾಶ್ವತ’

ದಾವಣಗೆರೆ: ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ಅಪಾರ ಕೊಡುಗೆ ನೀಡಿದ್ದು, ಇವರ ಹೆಸರು ಸರ್ವಕಾಲಕ್ಕೂ ಅಮರವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಕನ್ನಡ ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪ ಕಲೆಗೆ ನೀಡಿದ್ದಾರೆ.

ಇವರಲ್ಲಿ ವಿಷ್ಣುವರ್ಧನ ಅರಸನಕಾಲದಲ್ಲಿ ಶಿಲ್ಪಕಲೆಯು ಉತ್ತುಂಗ ಶಿಖರದಲ್ಲಿತ್ತು. ವಿಷ್ಣುವರ್ಧನನ ಹೆಂಡತಿ ಶಾಂತಲೆ ನಾಟ್ಯ ರಾಣಿ ಎಂದು ಪ್ರಸಿದ್ಧಿಯಾಗಿದ್ದಳು. ಈ ಕಾಲದಲ್ಲಿದ್ದ ಅಮರಶಿಲ್ಪಿ ಜಕಣಾಚಾರಿ ಬೇಲೂರು ಹಳೆಬೀಡಿನ ಚನ್ನಕೇಶವ ದೇವಾಲಯದಲ್ಲಿ ಶಿಲ್ಪಗಳನ್ನು ಕೆತ್ತನೆ ಮಾಡಿ ಹೆಸರಾಗಿದ್ದಾರೆ ಎಂದರು.

ಅಮರ ಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸಿತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಜಗತ್ತಿನ ಅದ್ಭುತ ಶಿಲ್ಪಿಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೇಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಲಸದಲ್ಲಿ ಜ್ಞಾನ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನ

ಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರಷ್ಡೇ  ಸಾಲದು. ಅವರ ಗುಣ ಮತು ಬೆಳೆದು ಬಂದ ಪರಿಶ್ರಮದ ಘಟನೆಗಳನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತೀ ಮುಖ್ಯ ಎಂದರು.

ಪ್ರೊ. ನಾಗರಾಜ್, ದಾವಣಗೆರೆ ಜಕಣಾಚಾರಿ ಜೀವನ ಚರಿತ್ರೆ ಮತ್ತು ಸಾಧನೆಗಳ ಕುರಿತು ಉಪನ್ಯಾಸ ನೀಡಿದರು.
ಮಹಾನಗರಪಾಲಿಕೆ ಉಪ ಮಹಾಪೌರರದ ಯಶೋಧ ಹೆಗ್ಗಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣ ನಾಯ್ಕ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ರಾಜೇಂದ್ರ ಪ್ರಸಾದ್ ಹಾಗೂ ವಿಶ್ವಕರ್ಮ ಸಮಾಜದ ಮುಖಂಡರು ಉಪಸ್ಥಿತರಿದ್ದರು. ಜ. 21 ರಂದು ಸರ್ವ ಸದಸ್ಯರ ಸಭೆ

ಬೆಂಗಳೂರು ನಗರ ಜಿಲ್ಲೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಂಗಳೂರು ನಗರ ಜಿಲ್ಲಾ ಶಾಖೆಯ ಸರ್ವ ಸದಸ್ಯರ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 21 2024 ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘದ ಸಭಾಂಗಣ, 1ನೇ ಮಹಡಿ ಬೆಂಗಳೂರು ನಗರ ಜಿಲ್ಲೆ. ಜಿಲ್ಲಾಧಿಕಾರಿಗಳ ಕಛೇರಿ ಆವರಣ ಕೆ.ಜಿ ರಸ್ತೆ, ಬೆಂಗಳೂರು ಇಲ್ಲಿ ಆಯೋಜಿಸಲಾಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು