ನವದೆಹಲಿ : ತಮಿಳುನಾಡಿಗೆ ನಿತ್ಯ 2,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸಿನ ಹಿನ್ನೆಲೆಯಲ್ಲಿ, ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ ನಡೆಯಲಿದೆ.ಈ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿ ತಮ್ಮ ವಾದಗಳನ್ನು ಮಂಡಿಸ ಲಿದ್ದಾರೆ. ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ, ಜಲಾಶಯಗಳಲ್ಲಿ ತಗ್ಗಿರುವ ನೀರಿನ ಪ್ರಮಾಣ ಹಾಗೂ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಊರುಗಳಿಗೆ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಗಾಧ ಅಗತ್ಯವನ್ನು ಕರ್ನಾಟಕ ಎತ್ತಿಹಿಡಿಯಲಿದೆ. ಅದೇ ರೀತಿ, ಬೆಳೆಗಳ ರಕ್ಷಣೆಗಾಗಿ ತಮ್ಮ ಪಾಲಿನ ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ತಮಿಳುನಾಡು ಒತ್ತಾಯಿಸುವ ಸಾಧ್ಯತೆಯಿದೆ.