LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮೈಸೂರಲ್ಲಿ ಸಂಭವಾಮಿ ಯುಗೇ ಯುಗೇ..

ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್‍ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವು ಇದೇ ತಿಂಗಳು 21ರಂದು ಬಿಡುಗಡೆಯಾಗಲಿದೆ.

ಜಯ್ ಶೆಟ್ಟಿ - ನಿಶಾ ರಜಪೂತ್ ಹಾಗೂ ಮಧುರಾಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಅರಮನೆಗಳ ನಗರ ಮೈಸೂರಿಗೆ ಭೇಟಿಕೊಟ್ಟು ಮಾಧ್ಯಮಗಳ ಜೊತೆ ಮಾತನಾಡಿತು.ತಮ್ಮ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಕುರಿತಂತೆ ಮಾತನಾಡಿದ ಚೇತನ್ ಚಂದ್ರಶೇಖರ್ ಶೆಟ್ಟಿ, ನಾನು ಕಳೆದ ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದು, ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದೇನೆ.

ಫ್ಯಾಮಿಲಿ ಆಡಿಯನ್ಸ್ ಕೂತು ನೋಡುವಂಥ ವಿಭಿನ್ನ ಕಮರ್ಷಿಯಲ್ ಕಾನ್ಸೆಪ್ಟ್ ಇರುವ ಈ ಚಿತ್ರಕ್ಕೆ ಚಿತ್ರದಲ್ಲಿ ಕೃಷ್ಣನ ಪಾತ್ರ ಹಾಗೂ ಅರ್ಜುನನನ್ನು ಹೋಲುವ ಪಾತ್ರಗಳೂ ಇವೆ. ಮಂಡ್ಯ, ಚನ್ನಪಟ್ಟಣ, ರಾಮನಗರ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಈಗಾಗಲೇ ಚಿತ್ರದ ಟೀಸರ್, ಸಾಂಗ್ಸ್ ವೈರಲ್ ಆಗಿದ್ದು, ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡುತ್ತಿದ್ದೇವೆ.

ಹಳ್ಳಿಯ ಹುಡುಗರು ವಿದ್ಯಾವಂತರಾದ ಮೇಲೆ, ಕೆಲಸದ ನಿಮಿತ್ತ ಪಟ್ಟಣಕ್ಕೆ ಅಂತ ಹೋದವರು ಅಲ್ಲೇ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು ? ನಮ್ಮ ಹಳ್ಳಿಗಳು ಉಳಿಯುವುದಾದರೂ ಹೇಗೆ ?, ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲೆಸಬೇಕು, ಹಳ್ಳಿಗಳನ್ನು ಬೆಳೆಸಬೇಕು ಎಂಬ ಕಥಾಹಂದರದ ಮೇಲೆ ಈ ಚಿತ್ರ ಮಾಡಿದ್ದೇವೆ. ಜೂನ್ 21ಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ. ಕಮರ್ಷಿಯಲ್ ಚಿತ್ರವಾದರೂ, ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವಂಥ ಹಲವಾರು ಅಂಶಗಳು ನಮ್ಮ ಚಿತ್ರದಲ್ಲಿವೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು