LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಶ್ರೀಸಿದ್ದಿವಿನಾಯಕನ ಸನ್ನಿಧಿಯಲ್ಲಿ "ಜನ" ಚಿತ್ರಕ್ಕೆ ಚಾಲನೆ

ಬಣ್ಣದ ಲೋಕದ ಆಕರ್ಷಣೆಗೆ ಒಳಗಾಗದವರೇ ಇಲ್ಲ, ನಟನಾಗಬೇಕೆಂದು ಬಂದವರು ನಿರ್ದೇಶಕ, ನಿರ್ಮಾಪಕನಾಗಿದ್ದೂ ಇದೆ, ನಿರ್ದೇಶಕನಾಗಬೇಕೆಂದು ಬಂದವರು ನಟ, ನಿರ್ದೇಶಕನಾಗಿಯೂ ಬೆಳೆದಿದ್ದಾರೆ.

ಆದರೆ ಇಲ್ಲೊಬ್ಬ ವಿತರಕ ನಿರ್ದೇಶಕನಾಗುತ್ತಿರುವುದು ವಿಶೇಷ. ದಶಕದ ಹಿಂದೆ ತಾನೊಬ್ಬ ನಿರ್ದೇಶಕನಾಗಬೇಕೆಂಬ ಮಹತ್ವಾಕಾಂಕ್ಷೆಯಿಂದ ಮಂಡ್ಯದಿಂದ ಗಾಂಧಿ ನಗರಕ್ಕೆ ಕಾಲಿಟ್ಟ ಬಿ.ಜಿ.ಚಂದನ್‍ಕುಮಾರ್ ವಿತರಕನಾಗಿ ಕಾರ್ಯನಿರ್ವಹಿಸುತ್ತಲೇ ಚಿತ್ರನಿರ್ಮಾಣದ ಎಲ್ಲಾ ಆಯಾಮಗಳನ್ನು ಅರಿತುಕೊಂಡು ಇದೀಗ ನಿರ್ದೇಶಕನಾಗುತ್ತಿದ್ದಾರೆ.

ಒಬ್ಬ ನಿರ್ದೇಶಕನಿಗೆ ತನ್ನ ಚಿತ್ರವನ್ನು ಜನರಿಗೆ ಹೇಗೆ ತಲುಪಿಸಬೇಕೆಂಬುದು ಸಹ ಗೊತ್ತಿರಬೇಕು ಎಂಬುದನ್ನು ಅರಿತಿರುವ ಚಂದನ್‍ಕುಮಾರ್ ದಶಕದ ಹಾದಿಯಲ್ಲಿ ಕಥೆ ಬರೆಯುವುದರಿಂದ ಹಿಡಿದು ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವುದನ್ನು ಚೆನ್ನಾಗಿಯೇ ತಿಳಿದುಕೊಂಡೇ ನಿರ್ದೇಶನಕ್ಕಿಳಿದಿದ್ದಾರೆ.

ಅವರ ಹೊಸ ಚಿತ್ರದ ಶೀರ್ಷಿಕೆ "ಜನ". ಈ ಚಿತ್ರದ ಮುಹೂರ್ತ ಸಮಾರಂಭ ದೇವಯ್ಯ ಪಾರ್ಕ್ ಬಳಿಯ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ನಿರ್ದೇಶಕರ ತಂದೆ ಗೋವಿಂದರಾಜ್ ಅವರು ಕ್ಲಾಪ್ ಮಾಡಿದರೆ, ಹಿರಿಯ ನಿರ್ಮಾಪಕ ಚಿನ್ನೇಗೌಡ್ರು ಕ್ಯಾಮೆರಾ ಚಾಲನೆ ಮಾಡಿ ಶುಭ ಹಾರೈಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು