LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಾಜ್ಯ ರೈತ ಸಂಘ, ಹಸಿರು ಸೇನೆಯ ಬೆಟ್ಟೆಗೌಡನದೊಡ್ಡಿ ಗ್ರಾಮ ಘಟಕ ಉದ್ಘಾಟನೆ

ಕನಕಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕನಕಪುರ ತಾಲೂಕು ಬೆಟ್ಟೆಗೌಡನದೊಡ್ಡಿ ಗ್ರಾಮ ಘಟಕದ ಉದ್ಘಾಟನೆಯನ್ನು ಹಾಗೂ ಪ್ರೊಫೆಸರ್ ಎಂ.ಡಿ.ನಂಜುಂಡಸ್ವಾಮಿಯವರ ಜನ್ಮದಿನಾಚರಣೆಯನ್ನು ಬೆಟ್ಟೆಗೌಡನದ ದೊಡ್ಡಿ ಗ್ರಾಮದಲ್ಲಿ ಆಚರಿಸಲಾಯಿತು.

ಜಿಲ್ಲಾ ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ್ ಮಾತನಾಡಿ, ರೈತ ಕುಲಕ್ಕೆ ಆಗುವ ಅನ್ಯಾಯಗಳನ್ನು ತಡೆಯುವ ನಿಟ್ಟಿನಲ್ಲಿ 1980ರಿಂದಲೂ ತನ್ನದೇ ಆದ ಹೋರಾಟವನ್ನು ಮುಂದುವರಿಸುತ್ತಾ ಬಂದಿದೆ. ಸರ್ಕಾರದ ರೈತ ವಿರೋಧ ನೀತಿಗಳನ್ನು ವಿರೋಧಿಸುವ ವಿರೋಧಪಕ್ಷವಾಗಿ ರೈತ ಸಂಘ ಕಾರ್ಯನಿರ್ವಹಿಸುತ್ತಿದೆ. ರೈತ ಸಂಘದ ಸಂಸ್ಥಾಪಕರಾದಂತಹ ಪ್ರೊ. ಎಂ.ಡಿ.ನಂಜುಂಡಸ್ವಾಮಿಯವರ ಸಿದ್ಧಾಂತಗಳನ್ನು ಜೀವಂತವಾಗಿರಿಸಿ ರೈತ ಈ ದೇಶದ ನೌಕರನಲ್ಲ ಮಾಲೀಕ ಎಂಬ ಮಾತನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈತ ಸಂಘ ಹೋರಾಡುತ್ತಿದೆ.

ಪ್ರೊಫೆಸರ್ ಎಂ.ಡಿ.ನಂಜುಂಡಸ್ವಾಮಿ ರವರ ಕೊಡುಗೆ ರೈತ ಕುಲಕ್ಕೆ ಅಪಾರವಾದದ್ದು ವಿದೇಶದಲ್ಲೂ ಕೂಡ ರೈತ ಸಂಘಟನೆಯ ಹೆಸರನ್ನು ಪ್ರಹರಿಸುವಂತೆ ಮಾಡಿದರು. ಹುಟ್ಟು ಹೋರಾಟಗಾರರಾದ ಅವರು ಸಾಮಾಜಿಕ, ಶೈಕ್ಷಣಿಕ ಹಕ್ಕುಗಳಿಗಾಗಿ ಹೋರಾಟದಲ್ಲಿ ತೊಡಗುತ್ತಿದ್ದರು.

ರೈತ ಕುಲಕ್ಕೆ ಆಗುವ ಅನ್ಯಾಯಗಳನ್ನು ತಡೆಯುವ ನಿಟ್ಟಿನಲ್ಲಿ 1980 ರಿಂದಲೂ ತನ್ನದೇ ಆದ ಹೋರಾಟವನ್ನು ಅಂಕಿ ಅಂಶಗಳ ಮೂಲಕ ರೈತರನ್ನು ಜಾಗೃತಿಗೊಳಿಸುವುದರಲ್ಲಿ ಶಕ್ತರಾಗಿದ್ದರು. ಪ್ರತಿಯೊಬ್ಬ ರೈತರ ಮನದಲ್ಲಿ ಆತ್ಮಸ್ಥೈರ್ಯ, ಸ್ವಾಭಿಮಾನವನ್ನು ಬಿತ್ತಿದ ವಿಶ್ವ ರೈತನಾಯಕ ಸಮಾಜಮುಖಿ ಹೃದಯವಂತ.

ನಂಜುಂಡಸ್ವಾಮಿ ರವರು ಮರುಜಪ್ತಿ ಚಳುವಳಿ, ನೀರ ಚಳುವಳಿ, ಗ್ರಾನೆಟ್ ಚಳುವಳಿಯಂತ ಅನೇಕ ಚಳುವಳಿಗಳ ಮುಂಚೂಣಿ ನಾಯಕರಾಗಿದ್ದರು. ಮೊಟ್ಟಮೊದಲ ಬಾರಿಗೆ ರೈತ ಈ ದೇಶದ ಮಾಲೀಕ, ರೈತ ಸಾಲಗಾರನಲ್ಲ ಸರ್ಕಾರವೇ ರೈತನಿಗೆ ಬಾಕಿದಾರ ಎಂದು ಮೊಟ್ಟಮೊದಲ ಬಾರಿಗೆ ರೈತರ ಆತ್ಮಸ್ಥೈರ್ಯವನ್ನು ಹೆಚ್ಚಿಸಿದವರು, ರೈತ ಸಂಘಕ್ಕೆ ಅವರ ಕೊಡುಗೆ ಅಪಾರವಾದದ್ದು ಎಂದು ಸ್ಮರಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷರಾದ ಕೆಬ್ಬಳ್ಳಿ ಶಿವರಾಜು ಮಾತನಾಡಿ, ಒಗ್ಗಟ್ಟಿನಲ್ಲಿ ಬಲವಿದೆ ಒಗ್ಗಟ್ಟಿನಿಂದ ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳೋಣ, ಕೇಂದ್ರ ಸರ್ಕಾರ ಹಿಂಪಡೆದಿರುವ ರೈತ ವಿರೋಧಿ ಮೂರು ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದು ವಿಪರ್ಯಾಸವೇ ಸರಿ, ಮುಂದಿನ ದಿನಗಳಲ್ಲಿ ನಾವು ಸಂಘಟಿತರಾಗಿ ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಕೋಡಿಹಳ್ಳಿ ಶಿವರಾಜು, ಅರುಣ ಗೌರಮ್ಮ, ಶೋಭಮ್ಮ ¨ಹಾಜರಿದ್ದರು. ಈ ಸಂದರ್ಭದಲ್ಲಿ ಬೆಟ್ಟೆಗೌಡನದೊಡ್ಡಿ ರವಿಕುಮಾರ್, ಕುಮಾರ, ಸ್ವಾಮಿ, ಕೆಂಪೇಗೌಡ, ನಾಗರಾಜು, ಪುಟ್ಟಸ್ವಾಮಿ ಮುಂತಾದವರು ರೈತ ಸಂಘಕ್ಕೆ ಸೇರ್ಪಡೆಯಾದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು