LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಜೂ.27ಕ್ಕೆ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ

ದೇವನಹಳ್ಳಿ: ಜೂನ್. 27 ಕ್ಕೆ ನಾಡಪ್ರಭು ಕೆಂಪೇಗೌಡರ ಜಯಂತಿ ದಿನದಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ಕೆಂಪೇಗೌಡ ಥೀಮ್ ಪಾರ್ಕ್ ಅನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಭವ್ಯ ಕಂಚಿನ ಪ್ರತಿಮೆ ಬಳಿ ಅಂದಾಜು 20 ಕೋಟಿ ರೂ.ಗಳ ವೆಚ್ಚದಲ್ಲಿ ಕೆಂಪೇಗೌಡ ತೀಮ್ ಪಾರ್ಕ್ ನಿರ್ಮಿಸಲಾಗಿದ್ದು ಜೂನ್ 27 ರಂದು ಮುಖ್ಯಮಂತ್ರಿಗಳು ಬೆಳಿಗ್ಗೆ 8.30 ಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
ರಾಜ್ಯ ಮಟ್ಟದ ಕಾರ್ಯಕ್ರಮವು ಬೆಂಗಳೂರು ನಗರದ ಕೆಂಗೇರಿಯ ಕೆಂಪೇಗೌಡ ಬಡಾವಣೆಯಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಕೆಂಪೇಗೌಡರ ವಂಶಸ್ಥರು ನೆಲೆಸಿದ್ದಂತ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಪ್ರತಿ ವರ್ಷದಂತೆ ಈ ವರ್ಷವೂ ಜ್ಯೋತಿ ಹೊರಡಲಿದೆ ಎಂದು ಹೇಳಿದರು.
ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಕನಿಷ್ಠ 5000 ಜನ ಹೊರಡಬೇಕಿದೆ. ಆವತಿಯಿಂದ ಜ್ಯೋತಿ, ಜೊತೆಗೆ ಏರ್ಪೋರ್ಟ್ ಲಿ ಸಿಎಂ ಕಾರ್ಯಕ್ರಮ, ರಾಜ್ಯ ಮಟ್ಟದ ಕಾರ್ಯಕ್ರಮ ಒಂದೇ ದಿನ ಇರುವುದರಿಂದ ಏಕಕಾಲದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜನರು ಭಾಗಿಯಾಗಲು ಸಾಧ್ಯವಾಗುವುದಿಲ್ಲ. ಹಾಗಾಗಿ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿAದ ಆಚರಿಸಲು ಬೇರೊಂದು ದಿನ ಆಯೋಜಿಸಲು ತೀರ್ಮಾನಿಸಲಾಗಿದ್ದು ಸಮುದಾಯದ ಮುಖಂಡರ ಜೊತೆ ಚರ್ಚಿಸಿ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಜೂನ್ 27 ರಂದು ಜಿಲ್ಲೆಯಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಬೆಳಗ್ಗೆ 7.30 ಕ್ಕೆ ಮಾಲಾರ್ಪಣೆ ಮಾಡಲಾಗುವುದು, ನಂತರ ಬೆಳಗ್ಗೆ 08 ಗಂಟೆಗೆ ಆವತಿಯಲ್ಲಿ ಜ್ಯೋತಿ ಹೊರಡಲು ಚಾಲನೆ ನೀಡಲಾಗುವುದು. ಬೆಳಗ್ಗೆ 8.30 ಕ್ಕೆ ಏರ್ಪೋರ್ಟ್ ಲಿ ಕೆಂಪೇಗೌಡ ಥೀಮ್ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದ್ದು ಅಲ್ಲಿಂದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಹೊರಡಲಿದ್ದೇವೆ ಎಂದರು.
ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಹೊರಡಲು ಜಿಲ್ಲೆಯ ನಾನಾ ಭಾಗಗಳಿಂದ ಬೆಳೆಗ್ಗೆ 07 ಗಂಟೆಗೆ ಬಸ್ ವ್ಯವಸ್ಥೆ ಮಾಡಲಾಗುವುದು, ಜೊತೆಗೆ ಉಪಹಾರ ಇರಲಿದೆ. ಜಿಲ್ಲೆಯ ಎಲ್ಲಾ ಸಂಘಟನೆಗಳ ಮುಖಂಡರು, ಸಮುದಾಯ ಮುಖಂಡರು, ಸಾರ್ವಜನಿಕರು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಸಚಿವರು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ. ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಬಯಪ ಅಧ್ಯಕ್ಷ ವಿ.ಶಾಂತಕುಮಾರ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ಸಿ.ಮಂಜುನಾಥ್, ಯೂತ್ ಕಾಂಗ್ರೇಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ನಾಗೇಶ್, ಬಿಜೆಪಿ ದೇವನಹಳ್ಳಿ ಮಂಡಲ ಅಧ್ಯಕ್ಷ ಅಂಬರೀಶ್ ಗೌಡ, ಬಯಪ ನಿರ್ದೇಶಕ ಪ್ರಸನ್ನಕುಮಾರ್ , ಮುಖಂಡರುಗಳಾದ ಹೆಚ್.ಆರ್.ರವಿಕುಮಾರ್, ಜೊನ್ನಹಳ್ಳಿ ಮುನಿರಾಜು, ಭುವನಹಳ್ಳಿ ಮುನಿರಾಜು, ದಿನ್ನೂರು ವೆಂಕಟೇಶ್, ಆರ್.ಕೆ.ನಂಜೇಗೌಡ, ಚೇತನ್ ಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು