LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನೇಗಿಲ ಯೋಗಿ ಟ್ರಸ್ಟ್‍ನಿಂದ ಸಮಾಜಮುಖಿ ಕಾರ್ಯಕ್ಕೆ ಯುವಕರ ಸೇರ್ಪಡೆ

ಕನಕಪುರ: ನೇಗಿಲಯೋಗಿಸಮಾಜ ಸೇವಾ ಟ್ರಸ್ಟ್ ಕನಕಪುರ ತಾಲ್ಲೂಕು ಘಟಕದ ವತಿಯಿಂದ ನಗರದ ಎಂ.ಜಿ.ರಸ್ತೆಯಲ್ಲಿರುವ ಕಚೇರಿ ಯಲ್ಲಿ ಶನಿವಾರ ಮಾಸಿಕ ಸಭೆ ಯನ್ನು ನಡೆಸಲಾಯಿತು.

ಸಭೆಯಲ್ಲಿ ಭಾಗಿಯಾಗಿದ್ದ ಟ್ರಸ್ಟ್‍ನ ಪದಾಧಿಕಾರಿಗಳು ಸಂಘಟನೆಯ ಬಗ್ಗೆ ಚರ್ಚೆ ನಡೆಸಿ ತಾಲ್ಲೂಕಿನ ಪ್ರತಿ ಪಂಚಾಯ್ತಿಗಳಿಗೆ ಭೇಟಿ ನೀಡಿ ಪಂಚಾಯ್ತಿವ್ಯಾಪ್ತಿಯಲ್ಲಿ ಟ್ರಸ್ಟ್‍ನ ಸಭೆಗಳನ್ನು ನಡೆಸುವ ಮೂಲಕ ಹೊಸ ಸದಸ್ಯರನ್ನು ಸೇರ್ಪಡೆ ಮಾಡಿಕೊಂಡು ಅವರನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಂಚಾಯ್ತಿ ಮಟ್ಟದಲ್ಲಿ ನೂತನ ಘಟಕಗಳನ್ನು ಆರಂಭಿಸಲು ತಿರ್ಮಾನಿಸಿದರು.

ಒಕ್ಕಲಿಗ ಸಮುದಾಯದ ಜನತೆ ಯನ್ನು ಸಂಘಟನೆ ಮಾಡುವುದಲ್ಲದೆ ಆಸಕ್ತ ಯುವಕ ಯುವತಿಯರಿಗೆ ಟ್ರಸ್ಟನಲ್ಲಿ ಜವಾಬ್ದಾರಿಯನ್ನು ನೀಡಿ ಅವರುಹೆಚ್ಚು ಕ್ರಿಯಾಶೀಲರಾಗಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಂತೆ ಸಲಹೆ ನೀಡಿದರು.ಮುಂದಿನ ದಿನಗಳಲ್ಲಿ ಟ್ರಸ್ಟ್ ವತಿಯಿಂದ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚಿನರೀತಿಯಲ್ಲಿ ನಡೆಸಲು ಕಾರ್ಯಕ್ರಮಗಳನ್ನು ರೂಪಿಸು
ವಂತೆ ಸಲಹೆ ನೀಡಿ ಪಂಚಾಯ್ತಿ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ನಡೆಸಿ ಹೊಸ ಚಂದದಾರರನ್ನು ಸೇರ್ಪಡೆಗೊಳಿಸಲ ರಸೀದಿ ಪುಸ್ತಕವನ್ನು ಪದಾಧಿಕಾರಿಗಳಿಗೆ ಸಭೆಯಲ್ಲಿ ನೀಡಲಾಯಿತು.

ಟ್ರಸ್ಟ್‍ನ ತಾಲ್ಲೂಕು ಘಟಕದ ಅಧ್ಯಕ್ಷ ಗಬ್ಬಾಡಿ ಕಾಡೇಗೌಡ, ಜಿಲ್ಲಾ ಉಪಾಧ್ಯಕ್ಷ ಚಿಕ್ಕರಂಗಯ್ಯ, ಕಾರ್ಯದರ್ಶಿ ಶಿವಲಿಂಗಯ್ಯ, ಪದಾಧಕಾರಿಗಳಾದ ಟಿ.ಎಂ.ರಾಮಯ್ಯ, ನಾಗರಾಜು, ಲಿಂಗೇಗೌಡ, ಸ್ವಾಮಿಗೌಡ, ಖಂಡೇಗೌಡ, ಮುದ್ದೇಗೌಡ, ಪುಟ್ಟೇಗೌಡ, ದೇವರಾಜು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು