LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

"ಭಾರತ ಯುದ್ಧವನ್ನು ಬಯಸುವುದಿಲ್ಲ: ರಾಜನಾಥ್ ಸಿಂಗ್"

ಕುರುಕ್ಷೇತ್ರ: ``ಭಾರತ ಯುದ್ಧವನ್ನು ಬಯಸುವುದಿಲ್ಲ. ಆದರೆ ಯುದ್ಧ ಮಾಡಲು ಬಲವಂತಪಡಿಸಿದರೆ ನಾವು ಓಡಿಹೋಗುವುದಿಲ್ಲ. ನಮ್ಮನ್ನು ಕೆಣಕಿದವರಿಗೆ ಸರಿಯಾದ ಉತ್ತರವನ್ನು ನೀಡುತ್ತೇವೆ ಎಂದು ನಾವು ಜಗತ್ತಿಗೆ ತೋರಿಸಿದ್ದೇವೆ.ಆಪರೇಷನ್ ಸಿಂಧೂರ್ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಬದಲಾಗಿ ಭಾರತದ ಸ್ವಯಂ ಬದ್ಧತೆ, ಸ್ವಾಭಿಮಾನ ಮತ್ತು ಆತ್ಮ ವಿಶ್ವಾಸದ ಘೋಷಣೆಯಾಗಿದೆ'' ಎಂದು ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಹೇಳಿದ್ದಾರೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಪ್ರತೀಕಾರವಾಗಿ ಭಾರತದಿಂದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಲಾಗಿತ್ತು. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದ ಪ್ರತಿಕ್ರಿಯೆಯು ಶ್ರೀಕೃಷ್ಣ ಪಾಂಡವರಿಗೆ ನೀಡಿದ ಸಂದೇಶದಿಂದ ರೂಪುಗೊಂಡಿದೆ. ಯುದ್ಧವನ್ನು ಎಂದಿಗೂ ಸೇಡು ಅಥವಾ ವೈಯಕ್ತಿಕ ಲಾಭಕ್ಕಾಗಿ ಮಾಡಬಾರದು, ಬದಲಿಗೆ ನ್ಯಾಯ ಮತ್ತು ಸರಿಯಾದ ನಡವಳಿಕೆಯನ್ನು ಎತ್ತಿಹಿಡಿಯಲು ಮಾಡಬೇಕು ಎಂದು ಶ್ರೀಕೃಷ್ಣ ಹೇಳಿದ್ದ. ಅದರಂತೆಯೇ ನಾವು ಕೂಡ ಆಪರೇಷನ್ ಸಿಂಧೂರ್ ನಡೆಸಿದೆವು ಎಂದಿದ್ದಾರೆ.

ಏಪ್ರಿಲ್‌ನಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್, ಈ ಘಟನೆಯು ದೇಶದ ಸಾಮೂಹಿಕ ಆತ್ಮಸಾಕ್ಷಿಯನ್ನು ಕದಡಿಸುತ್ತಲೇ ಇದೆ. ಪ್ರವಾಸಿಗರ ಧರ್ಮದ ಬಗ್ಗೆ ಕೇಳಿ ನಂತರ ಅವರನ್ನು ಗುರಿಯಾಗಿಸಿಕೊಂಡು ಶೂಟ್ ಮಾಡಿ ಮುಗ್ಧ ಪ್ರವಾಸಿಗರ ಹತ್ಯೆ ನಡೆಸಿದ್ದು ಬಹಳ ಕ್ರೂರ ಮತ್ತು ಅಮಾನವೀಯ ಕೃತ್ಯ ಎಂದು ಅವರು ಟೀಕಿಸಿದರು.

``ಆ ಘಟನೆಯು ಭಾರತದ ಶಾಂತಿಪ್ರಿಯ ಸ್ವಭಾವವನ್ನು ಪ್ರಶ್ನಿಸಿದ್ದು ಮಾತ್ರವಲ್ಲ, ಭಯೋತ್ಪಾದಕರು ಮತ್ತು ಅವರ ಬೆಂಬಲಿಗರು ಭಾರತದ ಸಭ್ಯತೆಯೇ ಅದರ ದೌರ್ಬಲ್ಯ ಎಂದು ಭಾವಿಸಿದ್ದರು. ಆದರೆ ಭಾರತವು ಭಗವದ್ಗೀತೆಯ ದೇಶ ಎಂಬುದನ್ನು ಅವರು ಮರೆತಿದ್ದರು. ಭಗವದ್ಗೀತೆ ಯುದ್ಧಭೂಮಿಯಲ್ಲಿ ಕರುಣೆ ಮತ್ತು ಧರ್ಮವನ್ನು ರಕ್ಷಿಸಲು ಸ್ಫೂರ್ತಿ ನೀಡುತ್ತದೆ ಎಂದು ಅವರು ಸಭೆಯನ್ನುದ್ದೇಶಿಸಿ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು