LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಜಿಂಬಾಬ್ವೆ ವಿರುದ್ಧ ಸರಣಿ ಗೆಲ್ಲುವ ತವಕದಲ್ಲಿ ಭಾರತ

ಕ್ರೀಡೆ: ಮೊದಲ ಖಿ20 ಪಂದ್ಯದಲ್ಲಿ ಭಾರತ ಜಿಂಬಾಬ್ವೆಯನ್ನು 7 ವಿಕೆಟ್‌ಗಳಿಂದ ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡ ಇದೀಗ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ವಶಪಡಿಸಿಕೊಳ್ಳುವ ಗುರಿಯಲ್ಲಿದೆ. ಅಭಿಷೇಕ್ ಶರ್ಮಾ ಬದಲು ಪ್ರಭ್‌ಸಿಮ್ರಾನ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಹರಾರೆ ಪಿಚ್ ವೇಗಿಗಳಿಗೆ ಅನುಕೂಲಕರವಾಗಿದ್ದು, ಭಾರತದ ದಾಖಲೆ ಅತ್ಯುತ್ತಮವಾಗಿದೆ. ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ, ಜಿಂಬಾಬ್ವೆಯನ್ನು (India vs Zimbabwe) 7 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಶ್ರೇಯಸ್ ಅಯ್ಯರ್ (Shreyas Iyer) ಪಡೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಳ್ಳುವ ಅವಕಾಶವನ್ನು ಹೊಂದಿದೆ. ಮೊದಲ ಪಂದ್ಯದಲ್ಲಿ, ಶ್ರೇಯಸ್ ಅಯ್ಯರ್ ಯುವ ಆಟಗಾರರಿಗೆ ಪ್ಲೇಯಿಂಗ್ 11 ರಲ್ಲಿ ಅವಕಾಶ ನೀಡಿದ್ದರು. ಅಶೋಕ್ ಶರ್ಮಾ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರೆ, ಮಯಾಂಕ್ ಯಾದವ್ ಎರಡು ವರ್ಷಗಳ ನಂತರ ತಂಡಕ್ಕೆ ಮರಳಿದ್ದರು. ಮಯಾಂಕ್ ಸಿಕ್ಕ ಅವಕಾಶದಲ್ಲಿ ಮಿಂಚಿದರೆ, ಅಶೋಕ್ ಶರ್ಮಾಗೆ ಉತ್ತಮ ಆರಂಭ ಸಿಗಲಿಲ್ಲ. ಇತ್ತ ಅಭಿಷೇಕ್ ಶರ್ಮಾ ಕೂಡ ಮೊದಲ ಪಂದ್ಯದಲ್ಲಿ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಎರಡನೇ ಪಂದ್ಯದಿಂದ ಇವರಿಬ್ಬರನ್ನು ಹೊರಗಿಡಲಾಗುತ್ತಾ ಅಥವಾ ಅದೇ ತಂಡವನ್ನು ಕಣಕ್ಕಿಳಿಸಲಾಗುತ್ತಾ ಎಂಬುದು ಪ್ರಶ್ನೆ.ಅಶೋಕ್ ಶರ್ಮಾಗೆ ಮತ್ತೊಂದು ಅವಕಾಶ: ಎರಡನೇ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳು ತೀರ ಕಡಿಮೆ. ಏಕೆಂದರೆ ಗೆಲುವಿನ ಸಂಯೋಜನೆಯನ್ನು ಯಾರೂ ಕೂಡ ಬದಲಿಸಲು ಹೋಗುವುದಿಲ್ಲ. ಆದಾಗ್ಯೂ ತಂಡದಲ್ಲಿ ಒಂದೇ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ. ಅಶೋಕ್ ಶರ್ಮಾ ಚೊಚ್ಚಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ನಾಲ್ಕು ಓವರ್‌ಗಳಲ್ಲಿ 29 ರನ್‌ಗಳನ್ನು ಬಿಟ್ಟುಕೊಟ್ಟರಾದರೂ ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಆದಾಗ್ಯೂ ಅವರಿಗೆ ಎರಡನೇ ಪಂದ್ಯದಲ್ಲಿ ಅವರಿಗೆ ಮತ್ತೊಂದು ಅವಕಾಶ ಸಿಗಬಹುದು.ಅಭಿಷೇಕ್ ಬದಲಿಗೆ ಪ್ರಭ್‌ಸಿಮ್ರಾನ್?:ಆದರೆ ಬ್ಯಾಟಿಂಗ್ ವಿಭಾಗದಲ್ಲಿ 1 ಬದಲಾವಣೆ ಆಗಬಹುದು. ಅಭಿಷೇಕ್ ಶರ್ಮಾ ಇತ್ತೀಚೆಗೆ ಸ್ಥಿರ ಪ್ರದರ್ಶನ ನೀಡುತ್ತಿಲ್ಲ. ವಿಶ್ವಕಪ್‌ನಲ್ಲಿ ಅವರ ಪ್ರದರ್ಶನವೂ ಕಳಪೆಯಾಗಿತ್ತು. ಅವರು ತಮ್ಮ ಕೊನೆಯ ಐದು ಇನ್ನಿಂಗ್ಸ್ಗಳಲ್ಲಿ ಕೇವಲ 73 ರನ್‌ಗಳನ್ನು ಮಾತ್ರ ಗಳಿಸಿದ್ದಾರೆ. ಮೊದಲ ಟಿ20ಯಲ್ಲಿ 8 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಔಟಾಗಿದ್ದರು. ಹೀಗಾಗಿ ಅಭಿಷೇಕ್ ಬದಲಿಗೆ ಪ್ರಭ್‌ಸಿಮ್ರಾನ್‌ಗೆ ಅವಕಾಶ ನೀಡಬಹುದು. ಇದು ಸಾಧ್ಯವಾದರೆ ವೈಭವ್ ಮತ್ತು ಪ್ರಭ್‌ಸಿಮ್ರಾನ್ ಆರಂಭಿಕರಾಗಿ ಕಣಕ್ಕಿಳಿಯಬಹುದು. ಉಳಿದಂತೆ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ.ಪಿಚ್ ವರದಿ: ಹರಾರೆಯಲ್ಲಿರುವ ಪಿಚ್ ಬ್ಯಾಟ್ಸ್ಮನ್ ಮತ್ತು ಬೌಲರ್‌ಗಳಿಗೆ ಇಬ್ಬರಿಗೂ ಅನುಕೂಲಕರವಾಗಿದೆ. ಮೊದಲ ಪಂದ್ಯದಲ್ಲಿ ಬೌಲರ್‌ಗಳು ಉತ್ತಮ ಬೌನ್ಸ್ ಪಡೆದರು. ಮಾಯಾಂಕ್ ಯಾದವ್ ಅವರ ಬೌಲಿಂಗ್‌ನಿಂದ ವಿಕೆಟ್ ಕೀಪಿಂಗ್ ಮಾಡುವಾಗ ಇಶಾನ್ ಕಿಶನ್ ಕಷ್ಟಪಟ್ಟು ಕೆಲಸ ಮಾಡಬೇಕಾಯಿತು. ಆದ್ದರಿಂದ, ಈ ಪಿಚ್ ಸ್ಪಿನ್ನರ್‌ಗಳಿಗಿಂತ ವೇಗದ ಬೌಲರ್‌ಗಳಿಗೆ ಅನುಕೂಲಕರವಾಗಿದೆ. ಈ ಪಿಚ್‌ನಲ್ಲಿ 170 ಕ್ಕಿಂತ ಹೆಚ್ಚಿನ ಸ್ಕೋರ್ ಗುರಿ ಕಲೆಹಾಕುವುದು ಕಷ್ಟ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು