LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

"ಕ್ರಿಕೆಟ್ ಶಿಶುಗಳ ವಿರುದ್ಧ ಗೆಲ್ಲಲು ಬೆವರು ಸುರಿಸಿದ ಭಾರತ"

ವಿಶ್ವದ ನಂಬರ್ ಒನ್ ಟಿ೨೦ ತಂಡವಾಗಿರುವ ಭಾರತದ ವಿರುದ್ಧ ದಿಟ್ಟ ಆಟ ಪ್ರದರ್ಶಿಸಿದ ಕ್ರಿಕೆಟ್ ಶಿಶುಗಳಾದ ಒಮಾನ್ ತಂಡ ಪಂದ್ಯ ಸೋತರೂ ಎಲ್ಲರ ಮನಸ್ಸು ಗೆದ್ದಿದೆ. ಆಮಿರ್ ಕಲೀಂ ಮತ್ತು ಹಮೀದ್ ಮಿರ್ಝಾ ಅವರ ಹೋರಾಟದ ಬ್ಯಾಟಿಂಗ್ ನ ಹೊರತಾಗಿಯೂ ಶುಕ್ರವಾರ ಜತೀಂದರ್ ಸಿಂಗ್ ಬಳಗ ಟೀಂ
ಇAಡಿಯಾ ವಿರುದ್ಧ ೨೧ ರನ್ ಗಳಿಂದ ಪರಾಭವಗೊAಡಿತು. ಈ ಗೆಲುವಿನ ಮೂಲಕ ಭಾರತ ತಂಡ ಎ ಬಣದಿಂದ ಅಜೇಯವಾಗಿಸೂಪರ್ ೪ರ ಹಂತವನ್ನು
ಪ್ರವೇಶಿಸಿದೆ.

ಅಬುಧಾಬಿಯ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಎ ಬಣದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ ೨೦ ಓವರ್ ಗಳಲ್ಲಿ ೮ ವಿಕೆಟ್ ನಷ್ಟಕ್ಕೆ ೧೮೮ ರನ್ ಗಳಿಸಿತು. ಇದಕ್ಕುತ್ತರವಾಗಿ ಒಮಾನ್ ತಂಡ ೨೦ ಓವರ್ ಗಳು ಮುಗಿದಾಗ ೪ ವಿಕೆಟ್ ನಷ್ಟಕ್ಕೆ ೧೬೭ ರನ್ ಗಳಿಸಲಷ್ಟೇ ಶಕ್ತವಾಯಿತು. ಆದರೆ ಒಂದೊAದು ವಿಕೆಟ್ ಗೂ ಭಾರತದ ಬೌಲಿಂಗ್ ಪಡೆಯನ್ನು ಪರದಾಡುವಂತೆ ಮಾಡಿದ ಒಮಾನ್ ಬ್ಯಾಟಿಂಗ್ ಪಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಒಮಾನ್ ತಂಡದ ಆರAಭಿಕ ಬ್ಯಾಟರ್ ಗಳ ವಿಕೆಟ್ ಕೀಳಲು ಭಾರತ ತಂಡ ಬಹಳ ಪ್ರಯಾಸ ಪಡಬೇಕಾಯಿತು. ನಾಯಕ ಜತಿಂದರ್ ಸಿAಗ್ ಮತ್ತು ಆಮಿರ್  ಕಲೀಮ್ ಅವರು ಮೊದಲ ವಿಕೆಟ್ ಗೆ ೮.೩ ಓವರ್ ಗಳಲ್ಲಿ ೫೬ ರನ್ ಪೇರಿಸಿದರು. ಈ ಜೋಡಿಯನ್ನು ಬೇರ್ಪಡಿಸಿದ್ದು ಸ್ಪಿನ್ನರ್ ಕುಲ್ದೀಪ್ ಯಾದವ್. ಜತಿಂದರ್ ಸಿಂಗ್ ಅವರು ಔಟಾಗುವ ಮುನ್ನ ೧೫ ಎಸೆತಗಳಲ್ಲಿ ೩೮ ರನ್ ಗಳಿಸಿದರು.

ಸಂಜು ಸ್ಯಾಮ್ಸನ್ ಅರ್ಧಶತಕ ಇದಕ್ಕೂ ಮೊದಲು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆರಿಸಿಕೊಂಡಿತು. ಉಪನಾಯಕ ಶುಭಮನ್ ಗಿಲ್ ಅವರು ಕೇವಲ ೫ ರನ್ ಮಾಡಿ ಶಾ ಫೈಝಲ್ ಅವರಿಗೆ ಕ್ಲೀನ್ ಬೌಲ್ಡ್ ಆದರು. ಬಳಿಕ ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಅವರು ಪವರ್ ಪ್ಲೇ ನಲ್ಲಿ ಒವರಿಗೆ ಹತ್ತು ರನ್ ಗಳಂತೆ ಗಳಿಸತೊಡಗಿದರು. ತಂಡದ ಮೊತ್ತ ೭೨ ಆಗಿದ್ದಾಗ ೩೮ ರನ್ ಗಳಿಸಿದ್ದ ಅಭಿಷೇಕ್ ಶರ್ಮಾ ಅವರು ಜಿತಿನ್ ರಾಮನಂದಿ ಅವರ ಬೌಲಿಂಗ್ ನಲ್ಲಿ ಕೀಪರ್ ವಿನಾಯಕ್ ಶುಕ್ಲಾ ಅವರಿಗೆ ಕ್ಯಾಚಿತ್ತು ಔಟಾದರು. ಅವರು ಕೇವಲ ೧೫ ಎಸೆತದಲ್ಲಿ ೫ ಬೌಂಡರಿ ಮತ್ತು ೨ ಸಿಕ್ಸರ್ ಗಳನ್ನು ಒಳಗೊಂಡ ೩೮ ರನ್ ಗಳಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು