LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದು ಬರ್ಮಿಂಗ್ಹ್ಯಾಮ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಏಕದಿನ ಸರಣಿ

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಸೋತ ನಂತರ ಟೀಮ್ ಇಂಡಿಯಾ ಸೇಡಿನ ಬೆಂಕಿಯಲ್ಲಿ ಉರಿಯುತ್ತಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದು ಬರ್ಮಿಂಗ್ಹ್ಯಾಮ್‌ನಲ್ಲಿ ಆರಂಭವಾಗಲಿದೆ.ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಅಗ್ರಗಣ್ಯ ಅನುಭವಿ ಆಟಗಾರರನ್ನು ಒಳಗೊಂಡಿದ್ದು, ಘಟಾನುಘಟಿ ಆಟಗಾರರೇ ತಂಡದಲ್ಲಿ ಇದ್ದಾರೆ. ಈತನ್ಮಧ್ಯೆ, ಎಲ್ಲರೂ ಎದುರು ನೋಡುತ್ತಿರುವ ಆಟಗಾರ ಬೇರೆ ಯಾರೂ ಅಲ್ಲ, ಯಾರ್ಕರ್ ಕಿಂಗ್ ಜಸ್ಟ್ರೀತ್ಬು ಮ್ರಾ ಅವರು. ಹೌದು, ಜಸ್ಟ್ರೀತ್ ಬುಮ್ರಾ ಅವರು 968 ದಿನಗಳ ನಂತರ ಟೀಮ್ ಇಂಡಿಯಾಕ್ಕೆ ಮರಳಲಿದ್ದಾರೆ.ಜಸ್ಟ್ರೀತ್ ಬುಮ್ರಾ ಕೊನೆಯ ಬಾರಿಗೆ ಭಾರತ ತಂಡದ ಪರ ಏಕದಿನ ಪಂದ್ಯವನ್ನು 2023 ರಲ್ಲಿ ಆಡಿದ್ದರು. ಈ ಪಂದ್ಯ ಏಕದಿನ ವಿಶ್ವಕಪ್ ಫೈನಲ್ ಆಗಿತ್ತು. ಅದಾದ ನಂತರ, ಬುಮ್ರಾ ಟೀಮ್ ಇಂಡಿಯಾ ಪರ ಮೈದಾನದಲ್ಲಿ ಕಾಣಿಸಿಕೊಂಡರು, ಆದರೆ ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿಲ್ಲ.ಜಸ್ಟ್ರೀತ್ ಬುಮ್ರಾ ಅವರು ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಿರೋದು ಭಾರತೀಯ ಬೌಲಿಂಗ್ ವಿಭಾಗವನ್ನು ಗಮನಾರ್ಹವಾಗಿ ಬಲಪಡಿಸಿದೆ. ಇದಲ್ಲದೆ, ಜಸ್ಟ್ರೀತ್ ಬುಮ್ರಾ ಅವರ ಅಪಾಯಕಾರಿ ಯಾರ್ಕರ್‌ನ ಭಯ ಇನ್ನೂ ಮುಂದುವರೆದಿರುವುದರಿಂದ ಅವರ ಮರಳುವಿಕೆ ಇಂಗ್ಲೆಂಡ್ ತಂಡದ ಬೆವರಿಳಿಯುವಂತೆ ಮಾಡಿದೆ.ಮೊದಲ ಪಂದ್ಯ ಯಾವ ಸಮಯಕ್ಕೆ ಪ್ರಾರಂಭ?: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಎರಡೂ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯು ವಿಭಿನ್ನ ಸಮಯಗಳಲ್ಲಿ ನಡೆಯಿತು. ಇದು ಏಕದಿನ ಪಂದ್ಯಗಳ ಆರಂಭದ ಸಮಯದ ಬಗ್ಗೆ ಅಭಿಮಾನಿಗಳಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಆದರೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಮಧ್ಯಾಹ್ನ 3 ಗಂಟೆಗೆ ನಿಗದಿಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು