LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಲಂಕಾ ವಿರುದ್ಧ ಭಾರತಕ್ಕೆ ಗೆಲುವು


ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಗಾಲೆ ಅಂತಾರಾಷ್ಟಿçÃಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಮೊದಲ ಇನಿಂಗ್ಸ್ನಲ್ಲಿ 462 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಶ್ರೀಲಂಕಾ ತಂಡವು ಕೇವಲ 284 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ನಲ್ಲಿ 178 ರನ್‌ಗಳ ಮುನ್ನಡೆ ಪಡೆದ ಟೀಮ್ ಇಂಡಿಯಾ ಕಡೆಯಿಂದ ದ್ವಿತೀಯ ಇನಿಂಗ್ಸ್ನಲ್ಲಿ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 2ನೇ ಇನಿಂಗ್ಸ್ನಲ್ಲಿ ಭಾರತ ತಂಡವು ಕೇವಲ 193 ರನ್‌ಗಳಿಸಿ ಆಲೌಟ್ ಆಯಿತು. ಪ್ರಥಮ ಇನಿಂಗ್ಸ್ನಲ್ಲಿನ 178 ರನ್‌ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 372 ರನ್‌ಗಳ ಗುರಿ ಪಡೆದ ಶ್ರೀಲಂಕಾ ತಂಡವು ಐದನೇ ದಿನದಾಟದ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಧನಂಜಯ ಡಿಸಿಲ್ವಾ (59) ಹಾಗೂ ಸೋನಲ್ ದಿನುಶಾ (77) ಅವರ ಅರ್ಧಶತಕದೊಂದಿಗೆ ದಿಟ್ಟ ಪ್ರದರ್ಶನ ನೀಡಿದ ಲಂಕಾ ಪಡೆ ಗೆಲುವಿನತ್ತ ಸಾಗುವ ಸೂಚನೆ ನೀಡಿದ್ದರು. ಆದರೆ ಧನಂಜಯ, ಸೋನಲ್ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದಲ್ಲಿ ಕಂಬ್ಯಾಕ್ ಮಾಡಿದ ಟೀಮ್ ಇಂಡಿಯಾ ಬೌಲರ್‌ಗಳು ಲಂಕಾ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿದರು. ಈ ಮೂಲಕ ಶ್ರೀಲಂಕಾ ತಂಡವನ್ನು 206 ರನ್‌ಗಳಿಗೆ ಆಲೌಟ್ ಮಾಡಿ ಟೀಮ್ ಇಂಡಿಯಾ 165 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST