LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ

India vs Zimbabwe T20: ಹರಾರೆಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಜಿಂಬಾಬ್ವೆಯನ್ನು 7 ವಿಕೆಟ್‌ಗಳಿಂದ ಮಣಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಜಿಂಬಾಬ್ವೆ ನೀಡಿದ 125 ರನ್‌ಗಳ ಗುರಿಯನ್ನು ಭಾರತ 14ನೇ ಓವರ್‌ನಲ್ಲಿ ತಲುಪಿತು. ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸಿ ತಂಡದ ಗೆಲುವಿಗೆ ಕಾರಣರಾದರು. ನಾಯಕ ಶ್ರೇಯಸ್ ಅಯ್ಯರ್ ಯಶಸ್ವಿ ನಾಯಕತ್ವಕ್ಕೆ ಇದು ಶುಭಾರಂಭ.ಹರಾರೆಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆತಿಥೇಯ ಜಿಂಬಾಬ್ವೆ (India vs Zimbabwe) ತಂಡವನ್ನು 7 ವಿಕೆಟ್?ಗಳಿಂದ ಮಣಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 125 ರನ್ ಗಳಿಸಿತು. ತಂಡದ ಪರ ವೆಸ್ಲಿ ಮಾಧೇವೆರೆ 39 ಮತ್ತು ಮರುಮಾನಿ 27 ರನ್?ಗಳ ಇನ್ನಿಂಗ್ಸ್ ಆಡಿದರು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 3 ವಿಕೆಟ್‌ಗಳನ್ನು ಕಳೆದುಕೊಂಡು 14ನೇ ಓವರ್‌ನಲ್ಲಿ ಗೆಲುವಿನ ದಡ ಮುಟ್ಟಿತು. ತಂಡದ ಪರ ವೈಭವ್ ಸೂರ್ಯವಂಶಿ (Vaibhav Sooryavanshi) ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದರು. ಈ ಗೆಲುವಿನೊಂದಿಗೆ ಶ್ರೇಯಸ್ ಅಯ್ಯರ್ ನಾಯಕನಾಗಿ ತಮ್ಮ ಗೆಲುವಿನ ಖಾತೆಯನ್ನು ತೆರೆದರು.ಜಿಂಬಾಬ್ವೆ ಬ್ಯಾಟಿಂಗ್ ವೈಫಲ್ಯ: ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಕಳಪೆ ಆರಂಭ ಪಡೆಯಿತು. ಸುಮಾರು ಎರಡೂವರೆ ವರ್ಷಗಳ ನಂತರ ಮೈದಾನಕ್ಕಿಳಿದ ಮಯಾಂಕ್ ಯಾದವ್ ಮೊದಲ ಎಸೆತದಲ್ಲೇ ವಿಕೆಟ್ ಪಡೆದರು. ಮೊದಲ ಎಸೆತವನ್ನೇ 149 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ ಬ್ರಿಯಾನ್ ಬೆನೆಟ್ ವಿಕೆಟ್ ಪಡೆದರು. ಇದಾದ ಬಳಿಕವೂ ಜಿಂಬಾಬ್ವೆಯ ಪೆವಿಲಿಯನ್ ಪರೇಡ್ ನಿಲ್ಲಲಿಲ್ಲ. ಆದಾಗ್ಯೂ 7ನೇ ವಿಕೆಟ್‌ಗೆ ಜೊತೆಯಾದ ವೆಸ್ಲಿ ಮಾಧೇವೆರೆ 39 ಮತ್ತು ಮರುಮಾನಿ 27 ರನ್‌ಗಳ ಇನ್ನಿಂಗ್ಸ್ ಆಡಿದರು. ಇವರಿಬ್ಬರ ಆಟದಿಂದಾಗಿ ಜಿಂಬಾಬ್ವೆ 125 ರನ್ ಕಲೆಹಾಕಿತು.ಮಿಂಚಿದ ಮಯಾಂಕ್: ಇತ್ತ ಟೀಂ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮಿಂಚಿದ ಮಯಾಂಕ್ ಯಾದವ್ 4 ಓವರ್‌ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದರು. ಪ್ರಿನ್ಸ್ ಯಾದವ್ ಕೂಡ 4 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಟಿ20 ಕ್ರಿಕೆಟ್‌ನಲ್ಲಿ ಚೊಚ್ಚಲ ಪಂದ್ಯವನ್ನಾಡಿದ ಅಶೋಕ್ ಶರ್ಮಾ 4 ಓವರ್‌ಗಳಲ್ಲಿ 29 ರನ್ ನೀಡಿದರು. ಆದರೆ ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಶಿವಂ ದುಬೆ 4 ಓವರ್‌ಗಳಲ್ಲಿ ಬೌಲಿಂಗ್ ಮಾಡಿ 32 ರನ್ ನೀಡಿ 1 ವಿಕೆಟ್ ಪಡೆದರು. ಸ್ಪಿನ್ನರ್ ರವಿ ಬಿಷ್ಣೋಯ್ 4 ಓವರ್‌ಗಳಲ್ಲಿ 24 ರನ್ ನೀಡಿ 1 ವಿಕೆಟ್ ಪಡೆದರು.ವೈಭವ್ ಗೆಲುವಿನ ಅರ್ಧಶತಕ: ಗೆಲುವಿಗೆ 126 ರನ್‌ಗಳ ಗುರಿ ಬೆನ್ನಟ್ಟಿದ ಭಾರತದ ಪರ ಅಭಿಷೇಕ್ ಶರ್ಮಾ ಮತ್ತು ವೈಭವ್ ಸೂರ್ಯವಂಶಿ ಉತ್ತಮ ಆರಂಭ ನೀಡಿದರು. ಆದರೆ ವೈಭವ್‌ಗೆ ಅಭಿಷೇಕ್ ಶರ್ಮಾ ಅವರಿಂದ ಯಾವುದೇ ಬೆಂಬಲ ಸಿಗಲಿಲ್ಲ. ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 8 ಎಸೆತಗಳನ್ನು ಎದುರಿಸಿ ಕೇವಲ ಒಂದು ರನ್ ಗಳಿಸಿ ಟೆಂಟ್‌ಗೆ ಮರಳಿದರು. ಆದರೆ ಇನ್ನೊಂದು ಬದಿಯಲ್ಲಿದ್ದ ವೈಭವ್ ಸೂರ್ಯವಂಶಿ ಕೇವಲ 19 ಎಸೆತಗಳಲ್ಲಿ 4 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳೊAದಿಗೆ 263 ಸ್ಟೆçöÊಕ್ ರೇಟ್‌ನಲ್ಲಿ 50 ರನ್ ಬಾರಿಸಿ ಔಟಾದರು. ವೈಭವ್ ಅವರ ಈ ಅರ್ಧಶತಕ ತಂಡದ ಗೆಲುವನ್ನು ಸುಲಭಗೊಳಿಸಿತು. ಈ ಪಂದ್ಯದಲ್ಲಿ ಇಶಾನ್ ಕಿಶಾನ್ ಕೂಡ 35 ರನ್‌ಗಳ ಕಾಣಿಕೆ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು