LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ದ.ಆಫ್ರಿಕಾ ವಿರುದ್ಧ ಸರಣಿ ಗೆದ್ದ ಭಾರತ

ಪರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯವನ್ನು 78 ರನ್ ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ. ಇದರೊಂದಿಗೆ ದಾಖಲೆಯನ್ನೂ ಮಾಡಿದೆ. ದ.ಆಫ್ರಿಕಾ ನೆಲದಲ್ಲಿ ಇದು ಭಾರತಕ್ಕೆ ಎರಡನೇ ಏಕದಿನ ಸರಣಿ ಗೆಲುವಾಗಿದೆ.

2018 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾ ಸರಣಿ ಗೆಲುವು ಕಂಡಿತ್ತು. ಇದು ಎರಡನೇ ಬಾರಿಗೆ ಕೆಎಲ್ ರಾಹುಲ್ ನಾಯಕತ್ವದಲ್ಲಿ ಆಫ್ರಿಕಾ ನೆಲದಲ್ಲಿ ಸಿಕ್ಕ ಗೆಲುವು ಇದಾಗಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸಂಜು ಸ್ಯಾಮ್ಸನ್ ಶತಕದ ನೆರವಿನಿಂದ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 8 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿತು. ಸಂಜು ಸ್ಯಾಮ್ಸನ್ 108 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಆಫ್ರಿಕಾ 45.5 ಓವರ್ ಗಳಲ್ಲಿ 218 ರನ್ ಗಳಿಗೆ ಆಲೌಟ್ ಆಯಿತು.

ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಜೋರ್ಝಿ ಈ ಪಂದ್ಯದಲ್ಲೂ ಉತ್ತಮ ಬ್ಯಾಟಿಂಗ್ ಮಾಡಿ 81 ರನ್ ಗಳಿಸಿ ಔಟಾದರು. ಆದರೆ ಭಾರತೀಯ ಬೌಲರ್ ಗಳ ಸಂಘಟಿತ ದಾಳಿಯಿಂದಾಗಿ ಆಫ್ರಿಕಾ ಸೋಲು ಕಾಣುವಂತಾಯಿತು. ಅರ್ಷ್ ದೀಪ್ ಸಿಂಗ್ 4, ಆವೇಶ್ ಖಾನ್, ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್, ಮುಕೇಶ್ ಕುಮಾರ್, ಅಕ್ಸರ್ ಪಟೇಲ್ ತಲಾ 1 ವಿಕೆಟ್ ಕಬಳಿಸಿದರು.

ಸರಣಿಯಲ್ಲಿ ಉತ್ತಮ ಬೌಲಿಂಗ್ ಮಾಡಿದ ಅರ್ಷ್ ದೀಪ್ ಸಿಂಗ್ ಸರಣಿ ಶ್ರೇಷ್ಠ, ಸಂಜು ಸ್ಯಾಮ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಈ ಸರಣಿ ಗೆಲುವಿನ ಮೂಲಕ ಒಂದು ವರ್ಷದಲ್ಲಿ ಅತೀ ಹೆಚ್ಚು ಏಕದಿನ ಪಂದ್ಯ ಗೆದ್ದ (27) ತಂಡಗಳ ಪೈಕಿ ಎರಡನೇ ಸ್ಥಾನ ಪಡೆಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು