LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹಾಕಿ ಫೈವ್ಸ್ ರ್ಯಾಂಕ್: ಎರಡನೇ ಸ್ಥಾನದಲ್ಲಿ ಭಾರತ ತಂಡಗಳು

ಲೂಸಾನ್: ಭಾರತ ಪುರುಷರ ಮತ್ತು ಮಹಿಳೆಯರ ಹಾಕಿ ಫೈವ್ಸ್ ತಂಡಗಳು ಎಫ್‍ಐಎಚ್ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿವೆ. ತಲಾ 1400 ಪಾಯಿಂಟ್ಸ್‍ನೊಂದಿಗೆ ಭಾರತ ಪುರುಷರ ತಂಡವು ಒಮಾನ್ ಮತ್ತು ಮಲೇಷ್ಯಾದೊಂದಿಗೆ ಜಂಟಿಯಾಗಿ ಎರಡನೇ ಸ್ಥಾನ ಹಂಚಿಕೊಂಡಿದೆ. ಏಷ್ಯನ್ ಚಾಂಪಿಯನ್‍ಷಿಪ್ ಪ್ರಶಸ್ತಿ ಗೆದ್ದ ಭಾರತ ಪುರುಷರ ತಂಡವು ಜನವರಿಯಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಐದನೇ ಸ್ಥಾನ ಗಳಿಸಿತ್ತು.

ತವರಿನ ನಡೆದ ವಿಶ್ವಕಪ್‍ನಲ್ಲಿ ಒಮಾನ್ ತಂಡವು ಕಂಚಿನ ಪದಕ ಗೆದ್ದಿತ್ತು. ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ಮಲೇಷ್ಯಾ ತಂಡವು ವಿಶ್ವಕಪ್ ರನ್ನರ್ ಅಪ್ ಸ್ಥಾನ ಪಡೆದಿತ್ತು.ನೆದರ್ಲೆಂಡ್ಸ್ ತಂಡವು 1750 ಪಾಯಿಂಟ್ಸ್‍ನೊಂದಿಗೆ ರ್ಯಾಂಕಿಂಗ್‍ನಲ್ಲಿ ಅಗ್ರಸ್ಥಾನ ಪಡೆದಿದೆ. ಯುರೋಪಿಯನ್ ಚಾಂಪಿಯನ್‍ಷಿಪ್‍ನಲ್ಲಿ ಪ್ರಶಸ್ತಿ ಗೆದ್ದಿದ್ದ ಡಚ್ ತಂಡವು, ಚೊಚ್ಚಲ ವಿಶ್ವಕಪ್‍ನಲ್ಲಿ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತ್ತು. ಪೋಲೆಂಡ್ ಮತ್ತು ಈಜಿಪ್ಟ್ ತಂಡಗಳು ತಲಾ 1350 ಅಂಕಗಳೊಂದಿಗೆ ಐದನೇ ಸ್ಥಾನವನ್ನು ಹಂಚಿಕೊಂಡಿವೆ.

ಮಹಿಳಾ ವಿಭಾಗದಲ್ಲೂ ನೆದರ್ಲೆಂಡ್ಸ್ ತಂಡವು (1750 ಪಾಯಿಂಟ್ಸ್) ಅಗ್ರಸ್ಥಾನ ಪಡೆದಿವೆ. ಈ ತಂಡವೂ ವಿಶ್ವಕಪ್ ಮತ್ತು ಯುರೋಪಿಯನ್ ಚಾಂಪಿಯನ್‍ಷಿಪ್‍ನಲ್ಲಿ ಪ್ರಶಸ್ತಿಗಳನ್ನು ಗೆದ್ದಿತ್ತು.ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ಸ್ ಅಪ್ ಹಾಗೂ ಏಷ್ಯನ್ ಚಾಂಪಿಯನ್‍ಷಿಪ್‍ನಲ್ಲಿ ಪ್ರಶಸ್ತಿ ಗೆದ್ದಿದ್ದ ಭಾರತ ತಂಡವು 1550 ಪಾಯಿಂಟ್ಸ್‍ನೊಂದಿಗೆ ಎರಡನೇ ಸ್ಥಾನ ಪಡೆದುಕೊಂಡಿದೆ. ವಿಶ್ವಕಪ್‍ನಲ್ಲಿ ಕಂಚಿನ ಪದಕ ಜಯಿಸಿದ ಪೋಲೆಂಡ್ (1450) ಮೂರನೇ ಸ್ಥಾನ ಪಡೆದುಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು