LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

"ವಿಶ್ವ ಬಿಲ್ಲುಗಾರಿಕೆಯಲ್ಲಿ ಭಾರತ ಕೀರ್ತಿ ಪತಾಕೆ "

ಬೆಂಗಳೂರು: ಭಾರತದ ಅಗ್ರಮಾನ್ಯ ಬಿಲ್ಲುಗಾರ್ತಿ ಜ್ಯೋತಿ ಸುರೇಖಾ ವೆನ್ನಂ ಅವರು ತಮ್ಮ ವೃತ್ತಿಜೀವನಕ್ಕೆ ಮತ್ತೊಂದು ಐತಿಹಾಸಿಕ ಗರಿ ಸೇರಿಸಿದ್ದಾರೆ. ಶನಿವಾರ ನಡೆದ ಆರ್ಚರಿ ವಿಶ್ವಕಪ್ ಫೈನಲ್‌ನಲ್ಲಿ ಅವರು ಕಂಚಿನ ಪದಕವನ್ನು ಮುಡಿಗೇರಿಸಿಕೊಳ್ಳುವ ಮೂಲಕ, ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕಾಂಪೌAಡ್ ಬಿಲ್ಲುಗಾರ್ತಿ ಎಂಬ ಇತಿಹಾಸವನ್ನು ಬರೆದಿದ್ದಾರೆ. ಭಾರತದ ಕಾಂಪೌAಡ್ ಜ್ಯೋತಿ ಸುರೇಖಾ ವೆಂಕಣ್ಣA ಅವರು ಚೀನಾದ ನಾನ್‌ಜಿಂಗ್‌ನಲ್ಲಿ ನಡೆದ ವಿಶ್ವಕಪ್ ಫೈನಲ್‌ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ವಿಶ್ವದ ನಂ.೨
ಆಟಗಾರ್ತಿ ಗ್ರೇಟ್ ಬ್ರಿಟನ್‌ನ ಎಲಾ ಗಿಬ್ಸನ್ ಅವರನ್ನು ೧೫೦-೧೪೫ ಅಂಕಗಳ ಅಂತರದಿAದ ಸೋಲಿಸಿ ಈ ಸಾಧನೆಗೈದರು. ಇದು ವಿಶ್ವಕಪ್
ಫೈನಲ್‌ನಲ್ಲಿ ಜ್ಯೋತಿ ಅವರ ಮೊದಲ ಪದಕವಾಗಿದೆ.

ಏಷ್ಯನ್ ಗೇಮ್ಸ್ ಚಾಂಪಿಯನ್ ಆಗಿರುವ ೨೯ ವರ್ಷದ ಜ್ಯೋತಿ, ಕಂಚಿನ ಪದಕದ ಪಂದ್ಯದಲ್ಲಿ ಸತತ ೧೫ ಪರಿಪೂರ್ಣ ಬಾಣಗಳನ್ನು ಹೊಡೆದು ಗಿಬ್ಸನ್ ಅವರನ್ನು ಮಣಿಸಿದರು. ಎಂಟು ಬಿಲ್ಲುಗಾರ್ತಿಯರು ಭಾಗವಹಿಸಿದ್ದ ಈ ಫೈನಲ್ ಟೂರ್ನಿಯಲ್ಲಿ, ಜ್ಯೋತಿ ಕ್ವಾರ್ಟರ್‌ಫೈನಲ್‌ನಲ್ಲಿ ಅಮೆರಿಕದ ಅಲೆಕ್ಸಿಸ್ ರೂಯಿಜ್ ವಿರುದ್ಧ ೧೪೩-೧೪೦ ಅಂತರದಿAದ ಗೆದ್ದು ಉತ್ತಮ ಆರಂಭ ಪಡೆದಿದ್ದರು. ಆದರೆ, ಸೆಮಿಫೈನಲ್‌ನಲ್ಲಿ ಮೆಕ್ಸಿಕೋದ ವಿಶ್ವದ ನಂ.೧ ಆಟಗಾರ್ತಿ ಆಂಡ್ರಿಯಾ ಬೆಸೆರಾ ವಿರುದ್ಧ ೧೪೩- ೧೪೫ ಅಂತರದಿAದ ಕೇವಲ ಎರಡು ಅಂಕಗಳ ಅAತರದಲ್ಲಿ ಸೋಲನುಭವಿಸಿದರು.

ಮೂರನೇ ಎಂಡ್‌ನಲ್ಲಿ ೮೭-೮೬ ಅಂತರದಿAದ ಮುನ್ನಡೆ ಸಾಧಿಸಿದ್ದರೂ, ನಾಲ್ಕನೇ ಎಂಡ್‌ನಲ್ಲಿ ಬೆಸೆರಾ ಮೂರು ೧೦ ಅಂಕಗಳನ್ನು ಗಳಿಸಿ ೧೧೬-೧೧೫ ಅಂತರದಿAದ ಮುನ್ನಡೆ ಸಾಧಿಸಿ, ಅಂತಿಮವಾಗಿ ಐದನೇ ಮಎಂಡ್‌ನಲ್ಲಿ ೨೯-೨೮ ಅಂತರದಿAದ ಗೆದ್ದು ಫೈನಲ್‌ಗೆ ತಲುಪಿದರು. ಈ ಗೆಲುವು ಜ್ಯೋತಿ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ೨೦೨೨ರಲ್ಲಿ ಟ್ಲಾಕ್ಸಲಾ ಮತ್ತು ೨೦೨೩ರಲ್ಲಿ ಹೆರ್ಮೋಸಿಲೊದಲ್ಲಿ ನಡೆದ ವಿಶ್ವಕಪ್ ಫೈನಲ್‌ನಲ್ಲಿ ಆರಂಭಿಕ ಸುತ್ತುಗಳಲ್ಲೇ ಹೊರಬಿದ್ದಿದ್ದ ಜ್ಯೋತಿ, ಈ ಬಾರಿ ತಮ್ಮ ಪ್ರದರ್ಶನವನ್ನು ಗಣನೀಯವಾಗಿ ಸುಧಾರಿಸಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು