ಅಲ್ ಅಮೆರಾತ್: ಅಂಡರ್-19 ಏಷ್ಯಾಕಪ್‌ನ ಸೆಮಿಫೈನಲ್‌ನಲ್ಲಿ ಅಫ್ಘಾನಿಸ್ತಾನವನ್ನು 8 ವಿಕೆಟ್‌ಗಳಿಂದ ಭರ್ಜರಿಯಾಗಿ ಸೋಲಿಸಿದ ಭಾರತ ಫೈನಲ್ ಪ್ರವೇಶಿಸಿದೆ.
ಓಮನ್‌ನ ಅಲ್ ಅಮರತ್ ಕ್ರಿಕೆಟ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತು. ಭಾರತದ ವೇಗಿ ಇಶಾನ್ ಸೂದ್ 3 ವಿಕೆಟ್ ಪಡೆದು ಮಿಂಚಿದರು. 228 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಕೇವಲ 36.5 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 79 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ. ತಂಡದ ನಾಯಕ ಲಕ್ಷ÷್ಯ ರಾಜೇಶ್ ರಾಯಚಂದಾನಿ 90 ಎಸೆತಗಳಲ್ಲಿ 93 ರನ್(13 ಬೌಂಡರಿ, 1 ಸಿಕ್ಸ್) ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರಿಗೆ ಆರ್ಯವೀರ್ ಸೆಹ್ವಾಗ್ 51 ರನ್(57 ಎಸೆತ, 4 ಬೌಂಡರಿ, 4 ಸಿಕ್ಸ್) ಸಿಡಿಸಿ ಉತ್ತಮ ಸಾಥ್ ನೀಡಿದರು. ಮೊದಲ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 9 ವಿಕೆಟ್‌ಗಳಿಂದ ಮಣಿಸಿದ ಹಾಲಿ ಚಾಂಪಿಯನ್ ಪಾಕಿಸ್ತಾನ ತಂಡ ಫೈನಲ್ ತಲುಪಿದೆ. ಫೈನಲ್ ಪಂದ್ಯವು ನವೆಂಬರ್ 14 ರಂದು ಓಮನ್‌ನ ಅಲ್ ಅಮರತ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 10:30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಟೂರ್ನಿಯ ಗುಂಪು ಹಂತದಲ್ಲಿ ಪಾಕಿಸ್ತಾನ ವಿರುದ್ಧ ಅನುಭವಿಸಿದ 3 ವಿಕೆಟ್‌ಗಳ ಸೋಲಿಗೆ ಹಾಗೂ ಕಳೆದ ಆವೃತ್ತಿಯ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತಕ್ಕೆ ಇದು ಉತ್ತಮ ಅವಕಾಶವಾಗಿದೆ.