LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಹರಿಹರ ನಗರಸಭೆ ಕುಡಿಯುವ ನೀರು ಸಂಸ್ಕರಣಾ ಘಟಕ ಪರಿಶೀಲನೆ

ದಾವಣಗೆರೆ: ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಶುದ್ದೀಕರಣ ಘಟಕದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ಅವರು  ಕೈಗೊಂಡರು.ಬೇಸಿಗೆ ಆರಂಭವಾಗುತ್ತಿದ್ದು ಕುಡಿಯುವ ನೀರನ್ನು ಶುದ್ದೀಕರಣ ಮಾಡಿ ಪೂರೈಕೆ ಮಾಡಬೇಕು, ಇಲ್ಲದಿದ್ದಲ್ಲಿ ಹಲವಾರು ಅನಾರೋಗ್ಯಕ್ಕೆ ಕಾರಣಗವುದರಿಂದ ಶುದ್ದೀಕರಣ ಘಟಕದಲ್ಲಿ ನೀರಿಗೆ ಕ್ಲೋರಿನೇಷನ್ ಮಾಡುವ ಮೂಲಕ ಪೂರೈಕೆ ಮಾಡಬೇಕು.

ಮತ್ತು ಬೇಸಿಗೆ ಆರಂಭವಾಗಿದ್ದು ನೀರನ್ನು ಮಿತವಾಗಿ ಹಾಗೂ ನಿರಂತರವಾಗಿ ನೀರು ಪೂರೈಕೆ ಮಾಡಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಿದರು.ಇ-ಖಾತಾ ಆಂದೋಲನಾ; ಜಿಲ್ಲಾಧಿಕಾರಿಯವರ ಸೂಚನೆಯಂತೆ ನಮ್ಮ ಖಾತೆ, ನಮ್ಮ ಹಕ್ಕು, ನಮ್ಮ ದಾಖಲೆ ನಮ್ಮ ಹಕ್ಕು ಘೋಷಣೆಯನ್ವಯ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಜನರಿಗೆ ಅನುಕೂಲವಾಗಲು ಇ-ಖಾತೆ ಆಂದೋಲನದ ಮೂಲಕ ಮನೆ ಮನೆಗೂ ಇ-ಸ್ವತ್ತು ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದರು.

ಹೊಸ ನಗರಸಭೆ ಕಟ್ಟಡ ಪರಿಶೀಲನೆ; ಹರಿಹರ ನಗರಸಭೆ ಹೊಸ ಕಟ್ಟಡವನ್ನು 4 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈ ಕಟ್ಟಡ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಗುಣಮಟ್ಟದ ಕಾಮಗಾರಿ ಜೊತೆಗೆ ನಿಗಧಿತ ಕಾಲಾವಧಿಯಲ್ಲಿ ಕಟ್ಟಡ ನಿರ್ಮಿಸಿಕೊಡಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ನೀರಿನ ಹರಿವು ಪರಿಶೀಲನೆ; ಭದ್ರಾ ಜಲಾಶಯದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಮೈಲಾರ ಜಾತ್ರಾ ಮಹೋತ್ಸವದ ಉದ್ದೇಶಕ್ಕೆ ತುಂಗಭದ್ರಾ ನದಿಗೆ ನೀರು ಬಿಡಲಾಗಿದ್ದು ನೀರಿನ ಹರಿವು ಬಗ್ಗೆ ಅಧಿಕಾರಿಗಳೊಂದಿಗೆ ಹರಿಹರದ ಸಮೀಪ ಪರಿಶೀಲನೆ ನಡೆಸಿದರು.ಈ ವೇಳೆ ನಗರಾಭಿವೃದ್ದಿಕೋಶ ಯೋಜನಾ ನಿರ್ದೇಶಕ ಮಹಂತೇಶ್, ತಹಶೀಲ್ದಾರ್ ಗುರುಬಸವರಾಜ್, ನಗರಸಭೆ ಆಯುಕ್ತರಾದ ಬಸವರಾಜ್ ಐಗೂರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು