LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಶಾಸಕರು, ಜಿಲ್ಲಾಧಿಕಾರಿಯವರಿಂದ ವಿವಿಧ ರಸ್ತೆ ಕಾಮಗಾರಿ ಪರಿಶೀಲನೆ

ಚಾಮರಾಜನಗರ: ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಇಂದು ನಗರದ ಬಿ. ರಾಚಯ್ಯ ಜೋಡಿರಸ್ತೆ ಅಗಲೀಕರಣ ಹಾಗೂ ನ್ಯಾಯಾಲಯ ರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.

ಪಟ್ಟಣದ ರಸ್ತೆಗಳ ಅಭಿವೃದ್ಧಿ ಸಂಬಂಧ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ದಾಖಲಾದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯೇ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಿಂದ ಆರಂಭವಾದ ಸ್ಥಳ ಪರಿಶೀಲನೆ ಕಾರ್ಯದಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿಯವರು ರಸ್ತೆಯುದ್ದಕ್ಕೂ ಸಂಚರಿಸಿ ರಸ್ತೆ ಅಗಲೀಕರಣಕ್ಕೆ ಎದುರಾಗಿರುವ ಸಮಸ್ಯೆ ಖುದ್ದು ವೀಕ್ಷಿಸಿದರು.

ನಗರದ ಕರಿನಂಜನಪುರ ರಸ್ತೆಯ ಎರಡು ಬದಿಗಳಲ್ಲಿ ಒತ್ತುವರಿಯಾಗಿ ರುವ ಭಾಗಗಳ ಬಗ್ಗೆ ಸ್ಥಳದಲ್ಲಿದ್ದ ನಗರಸಭೆ ಅಧಿಕಾರಿಗಳಿಂದ ಮಾಹಿತಿ ಪಡೆದು ಒತ್ತುವರಿಯಾಗಿರುವ ರಸ್ತೆಯ ವಿಸ್ತೀರ್ಣದ ಅಳv ಪರಿಶೀಲಿಸಿದರು.ಕರಿನಂಜನಪುರ ರಸ್ತೆಯಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಜನರ ಸಂಚಾರಕ್ಕೆ ಮುಕ್ತ ಅವಕಾಶ ಮಾಡಿಕೊಡಬೇಕು.

ಗುಣಮಟ್ಟದ ಕಾಮಗಾರಿ ಆಗಬೇಕು. ಮನೆ ಕಟ್ಟಲು ಲೈಸೆನ್ಸ್ ನೀಡುವ ಸಂದರ್ಭದಲ್ಲಿ ಯಾವುದೇ ಸರ್ಕಾರಿ ಜಾಗಒತ್ತುವರಿಯಾಗದಂತೆ ಜವಾಬ್ದಾರಿ ವಹಿಸುವಂತೆ ಶಾಸಕರು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ನಗರದ ಬಿ. ರಾಚಯ್ಯ ಜೋಡಿರಸ್ತೆಯಲ್ಲಿ ಕಟ್ಟಿಕೊಂಡಿರುವ ಚರಂಡಿಗಳಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಿದರು.

ಜೋಡಿರಸ್ತೆಯ ಕಾಮಗಾರಿ ಕುರಿತು ನಗರಸಭೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಪರಿಹಾರ ಸಂಬಂಧ ಅಗತ್ಯ ಪ್ರಸ್ತಾವನೆ ತಯಾರಿಸಿ ಸಲ್ಲಿಸುವಂತೆ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ನಗರಸಭಾ ಸದಸ್ಯರಾದ ಆರ್.ಪಿ. ನಂಜುಂಡಸ್ವಾಮಿ, ಎಂ.ಆರ್. ರಾಜಪ್ಪ, ಮಹೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಟರಾಜು, ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗಿರಿಜಮ್ಮ, ಕಂದಾಯ ನಿರೀಕ್ಷಕರಾದ ಶರವಣ, ಹಿರಿಯ ಆರೋಗ್ಯ ನಿರೀಕ್ಷರಾದ ಮಂಜುನಾಥ್, ನಾರಾಯಣ್, ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ, ಸಮುದಾಯ ಸಂಘಟನಾಧಿಕಾರಿ ವೆಂಕಟನಾಯಕ್, ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು