LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಕಾರ್ಖಾನೆ ಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ

ಬೆಳಗಾವಿ, ಸುವರ್ಣಸೌಧ: ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ 100 ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು.

ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಸಕ್ಕರೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕರಾದ ಲಕ್ಷಣ ಸವದಿ ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆಟಿ ಪಾಟೀಲ್, ಆಹಾರ ಇಲಾಖೆಯ ಕಾರ್ಯದರ್ಶಿ, ಆಯುಕ್ತರು, ಕರ್ನಾಟಕ ಆಹಾರ ನಿಗಮ ವ್ಯವಸ್ಥಾಪಕ ನಿರ್ದೇಶಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರು, ಆಹಾರ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ, ವಿಶೇಷ ಅಧಿಕಾರಿಗಳು ಹಾಗೂ ಬೆಳಗಾವಿ , ಕಲಬುರ್ಗಿ ವಿಭಾಗದ ಆಹಾರ ಇಲಾಖೆಯ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ವ್ಯವಸ್ಥಾಪಕರು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು