LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಡ್ರಗ್ಸ್ ಮುಕ್ತ ಕಾರಾಗೃಹ ನಿರ್ಮಾಣಕ್ಕೆ ಕೈದಿಗಳಿಗೆ ಮಾದಕ ಪರೀಕ್ಷೆಗೆ ಸೂಚನೆ

ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಪರಪ್ಪನ ಅಗ್ರಹಾರದಲ್ಲಿ ಮಾರ್ಚ್ ೯ ರಂದು ಸಿಬ್ಬಂದಿಯೇ ತನ್ನ ಒಳುಡುಪಿನಲ್ಲಿ ಮಾದಕ ವಸ್ತುಗಳನ್ನು ಜೈಲಿನೊಳಗೆ ತಂದ ಘಟನೆ ನಡೆದಿತ್ತು. ಇದೊಂದೇ ಅಲ್ಲದೆ ಹಲವು ಬಾರಿ ರಾಜ್ಯದ ಜೈಲುಗಳಲ್ಲಿ ಈ ರೀತಿಯ ಅಕ್ರಮಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆ ನಿಮ್ಹಾನ್ಸ್ ಆಸ್ಪತ್ರೆಯ ಸಹಯೋಗದೊಂದಿಗೆ ಡ್ರಗ್ಸ್ ಮುಕ್ತ ಕಾರಾಗೃಹ ನಿರ್ಮಾಣ ಮಾಡುವ ಗುರಿಯಿಂದ ಕೈದಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಈ ಯೋಜನೆಯಡಿ ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ಗಾಂಜಾ, ಹೆರೊಯಿನ್, ಕೊಕೈನ್ ಸೇರಿದಂತೆ ವಿವಿಧ ಮಾದಕ ವಸ್ತುಗಳ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸದ್ಯ ಮೊದಲ ಹಂತದಲ್ಲಿ ಎಲ್ಲಾ ಜೈಲುಗಳಲ್ಲಿ ಸುಮಾರು ಶೇ೧೦ರಷ್ಟು ಕೈದಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಕಾರಾಗೃಹ ಇಲಾಖೆ ನೀಡಿರುವ ವಿಶೇಷ ಕಿಟ್‌ಗಳ ಮೂಲಕ ಜೈಲು ವೈದ್ಯಾಧಿಕಾರಿಗಳು ಈ ಪರೀಕ್ಷೆಗಳನ್ನು ಮಾಡುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು