LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ವೈದ್ಯಕೀಯ ಕಾಲೇಜು ಆರಂಭಿಸಲು ಡಿಪಿಆರ್ ತಯಾರಿಗೆ ಸೂಚನೆ

ಕೋಲಾರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಲೋಕೋಪಯೋಗಿ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.
ನಗರದಲ್ಲಿ ಬುಧವಾರ ಸೋಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಪಿಆರ್‌ಗೆ ಅಂದಾಜು ವೆಚ್ಚ ಸಿದ್ಧವಾಗುತ್ತಿದ್ದು, ಅದನ್ನು ಸದ್ಯದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು. ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸ್ಯಾನಿಟೋರಿಯಂ ಜಾಗ ಸೇರಿದಂತೆ ಎರಡು ಕಡೆ ಸ್ಥಳ ಪರಿಶೀಲಿಸಿದ್ದೇವೆ. ಸದ್ಯದಲ್ಲೇ ಸೂಕ್ತ ಜಾಗ ಅಂತಿಮಗೊಳಿಸಲಾಗುವುದು ಎಂದರು. ಕೋಲಾರ ನಗರದ ರಿಂಗ್ ರಸ್ತೆಗೆ ಡಿಪಿಆರ್ ಆಗಿದೆ. ಹೊಸ ಎಪಿಎಂಸಿ ಮಾರುಕಟ್ಟೆಗೆ 63 ಎಕರೆ ಜಾಗಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇನ್ನು 40 ಎಕರೆ ಜಾಗ ಕೊಡಲು ಪ್ರಕ್ರಿಯೆ ನಡೆಯುತ್ತಿದೆ. ಅದಕ್ಕೂ ಸದ್ಯದಲ್ಲೇ ಒಪ್ಪಿಗೆ ಸಿಗಲಿದೆ. ಜಿಲ್ಲಾಧಿಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಅವರು 17 ಎಕರೆ ಜಾಗವನ್ನು ಗಿಡ ಬೆಳೆಸಲು ಅರಣ್ಯ ಇಲಾಖೆಗೆ ನೀಡಿದ್ದರು. ಅಗತ್ಯವಿದ್ದಾಗ ವಾಪಸ್ ಪಡೆಯುವ ಷರತ್ತು ಕೂಡ ವಿಧಿಸಿದ್ದರು. ಹೀಗಾಗಿ, ಆ ಜಾಗ ಪಡೆದು ಅರಣ್ಯ ಇಲಾಖೆಗೆ ಬೇರೆ ಜಾಗ ಕೊಡುತ್ತೇವೆ. ಈವರೆಗೆ ಯಾರ ಕೈಯಲ್ಲೂ ಎಪಿಎಂಸಿಗೆ ಜಾಗ ಕೊಡಿಸುವ ಕೆಲಸ ನಡೆದಿರಲಿಲ್ಲ. ಈಗ ನಮ್ಮ ಅವಧಿಯಲ್ಲಿ ಜಾಗ ಕೊಡುತ್ತಿದ್ದೇವೆ ಎಂದರು.
ಕೋಲಾರ ನಗರ ಹಾಗೂ ತಾಲ್ಲೂಕಿನಲ್ಲಿ ನಾವೇನು ಕೆಲಸ ಮಾಡುತ್ತಿದ್ದೇವೆ ಎಂದು ನಾವು ಹೇಳುವುದಿಕ್ಕಿಂತ ಜನರೇ ಮಾತನಾಡುತ್ತಿದ್ದಾರೆ. ವೈದ್ಯಕೀಯ ಕಾಲೇಜು, ರಿಂಗ್ ರಸ್ತೆ, ಎಪಿಎಂಸಿಗೆ ಜಾಗದ ಬಗ್ಗೆ ಆದ್ಯತೆ ನೀಡಿದ್ದೇವೆ. ಆರೋಗ್ಯ ಭಾಗ್ಯ, ರೈತರಿಗೆ ಉತ್ತಮ ಬೆಲೆ ದೊರಕಿಸಿಕೊಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿ, ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಹಿಂದೆಯೂ ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಚುನಾವಣೆ ಎಂದ ಮೇಲೆ ಗೊಂದಲ, ಜಗಳ ಸಹಜ ಎಂದು ನುಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲೂರಿಗೆ ಏಪ್ರಿಲ್ 1ಕ್ಕೆ ಬರಬೇಕಿತ್ತು. ಅದನ್ನು ಮುಂದೂಡಲಾಗಿದ್ದು, ಏ.15ರ ನಂತರ ಭೇಟಿ ನೀಡಲಿದ್ದಾರೆ. ಕೋಲಾರಕ್ಕೂ ನಂತರದ ದಿನಗಳಲ್ಲಿ ಬರಲಿದ್ದಾರೆ. ದೇವನಹಳ್ಳಿ, ವೇಮಗಲ್, ನರಸಾಪುರ, ಮಾಲೂರು, ಹೊಸೂರು ಹೆದ್ದಾರಿ ರಸ್ತೆಗೂ ಆಗ ಚಾಲನೆ ನೀಡಲಿದ್ದಾರೆ. ಈಗಾಗಲೇ ನಾಲ್ಕು ಪಥಗಳ ಈ ರಸ್ತೆಗೆ ಟೆಂಡರ್ ಆಗಿದ್ದು, 150 ಎಂಜಿನಿಯರ್‌ಗಳು ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದರು.ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವುದಷ್ಟೇ ಕೆ.ಸಿ.ವ್ಯಾಲಿ ಯೋಜನೆಯ ಉದ್ದೇಶವಾಗಿದೆ. ಹಿಂದೆ ನಮ್ಮಲ್ಲಿ 2 ಸಾವಿರ ಅಡಿ ಕೊಳವೆ ಬಾವಿ ತೋಡಿದರೂ ನೀರು ಬರುತ್ತಿರಲಿಲ್ಲ. ಹೀಗಾಗಿ, ಎರಡನೇ ಹಂತದ ಶುದ್ಧೀಕರಣ ಮಾಡಿ ನೀರು ತಂದೆವು ಎಂದು ಹೇಳಿದರು.ಅರಹಳ್ಳಿ ವಿವಿಧೋದ್ದೇಶದ ಪ್ರಾಥಮಿಕ ಕೃಷಿ ಗ್ರಾಮೀಣ ಸಂಘದ ಚುನಾವಣೆ ಇದೆ. ಕಾಂಗ್ರೆಸ್ ಬೆಂಬಲಿತ 12 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು, ಸೋಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಎಲ್ಲರೂ ಸೊಸೈಟಿ ನಿರ್ದೇಶಕರಾಗಲು ಅರ್ಹರಿದ್ದು, ಕೆಲಸ ಮಾಡುವಂಥವರು. ಇವರಿಗೆ ಷೇರುದಾರರು ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಬಿಜೆಪಿ ಹಾಗೂ ಜೆಡಿಎಸ್‌ನವರು ಕೂಡ ದೇವರ ಮೊರೆ ಹೋಗಿದ್ದಾರೆ ಎಂಬ ಪ್ರಶ್ನೆಗೆ, ಬಿಜೆಪಿ, ಜೆಡಿಎಸ್‌ನವರು ದೇವರಮೊರೆಹೋಗಿರುವುದುಸಂತೋಷದವಿಚಾರ. ಆದರೆ, ದೇವರುಷೇರುದಾರರಿಗೆ ಆಶೀರ್ವಾದ ಮಾಡಲಿದ್ದು, ಅವರುನಮ್ಮಪಕ್ಷದಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವಾದಮಾಡುತ್ತಾರೆ ಎಂಬವಿಶ್ವಾಸವಿದೆ ಎಂದರು.ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಹಾಫ್ ಕಾಮ್ಸ್ ಮಾಜಿ ಅಧ್ಯಕ್ಷ ಅರಹಳ್ಳಿ ಗೋಪಾಲಕೃಷ್ಣ, ಸೊಸೈಟಿ ಹಾಲಿ ಅಧ್ಯಕ್ಷ ಶ್ರೀನಿವಾಸ್, ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕಿಲಾರಿಪೇಟೆ ಮಣಿ, ಗಂಗಣ್ಣ, ಅಮರನಾಥ್, ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯನಗರ ಮಂಜುನಾಥ್ ಸೇರಿದಂತೆ ಅಭ್ಯರ್ಥಿಗಳು ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು