ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಪೊಲೀಸ್ ಇಲಾಖೆಯಲ್ಲಿ ಸಮಗ್ರ ಬೆಳವಣಿಗೆಗಳು ನಡೆದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಸ್ಟಿಂಗ್ ಆಪರೇಷನ್ ಸಂಬAಧ ಬಂದ ದೂರಿನ ಹಿನ್ನೆಲೆಯಲ್ಲಿ ಖಾಸಗಿ ಟಿವಿ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದೆ. ಪವರ್ ಟಿವಿ ವಿರುದ್ಧ ಕ್ರಮ ಜರುಗಿಸಿ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸರ್ಕಾರದ ವತಿಯಿಂದ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ರಾಜ್ಯದಲ್ಲಿ ಕೇಳಿಬರುತ್ತಿರುವ ಸ್ಟಿಂಗ್ ಆಪರೇಷನ್ ಬಗ್ಗೆ ಆರೋಪಗಳು ಪ್ರತ್ಯಾರೋಪಗಳ ಹಿನ್ನೆಲೆಯಲ್ಲಿ ಜೆಡಿಎಸ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಸ್ಟಿಂಗ್ ಆಪರೇಷನ್ನಲ್ಲಿ ಖಾಸಗಿ ಟಿವಿ ಮಾಲೀಕರು ಹಾಗೂ ನೌಕರರ ಸಿಬ್ಬಂದಿ ಪಾಲ್ಗೊಂಡಿದ್ದಾರೆ ಎಂದು ದೂರಿದ್ದರು. ಇದರ ಜತೆಗೆ ಜೆಡಿಎಲ್ಪಿ ನಾಯಕ ಸುರೇಶ್ ಬಾಬು ನೇತೃತ್ವದ ನಿಯೋಗ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ತನಿಖೆಗೆ ಆಗ್ರಹಿಸಿ ದೂರು ನೀಡಿದ್ದರು. ಈ ದೂರಿನ್ವಯ ಸರ್ಕಾರ ಇದೀಗ ಸದರಿ ಟಿ.ವಿ. ಮಾಲೀಕ ಮತ್ತು ನೌಕರರು ಸಿಬ್ಬಂದಿ ವಿರುದ್ಧ ತನಿಖೆ ನಡೆಸಿ ವರದಿ ನೀಡುವಂತೆ ತಿಳಿಸಿದೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದ ಆಡಳಿತ ಮತ್ತು ವಿಪಕ್ಷದ ಶಾಸಕರನ್ನು ಬೆದರಿಸಿ ಹಣ ಸುಲಿಗೆ ಮಾಡುವ ಬಗ್ಗೆ ಆರೋಪ ಕೇಳಿಬಂದಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಹ ಸ್ಟಿಂಗ್ ಆಪರೇಷನ್ಗೆ ಒಳಪಡಿಸಲಾಗಿದೆ ಎಂದ ಪ್ರಬಲವಾಗಿ ಕೇಳಿಬಂದಿತ್ತು. ಈ ಎಲ್ಲದರ ಹಿನ್ನೆಲೆಯಲ್ಲಿ ಸದರಿ ಟಿ.ವಿ. ಮಾಲೀಕರ ಮೇಲೆ ಕೇಳಿಬಂದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.