LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chitradurga

ಪಾಳು ಮನೆಯಲ್ಲಿ 5 ಅಸ್ಥಿಪಂಜರ ಆತ್ಮಹತ್ಯೆಯೋ, ಕೊಲೆಯೋ ಎಂಬುದರ ಬಗ್ಗೆ ತನಿಖೆ

ಚಿತ್ರದುರ್ಗ: ನಗರದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ ಆಗಿವೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಮನೆಯಲ್ಲಿ ಪವನ್ ಕುಮಾರ್ ಸಂಬಂಧಿ ಜಗನ್ನಾಥರೆಡ್ಡಿ ಮತ್ತು ಕುಟುಂಬ ವಾಸವಾಗಿದ್ದರು. ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ವಾಸವಾಗಿದ್ದರು.

ಸ್ಥಳೀಯರೊಬ್ಬರು ನೀಡಿದ ಮಾಹಿತಿ ಅಧರಿಸಿ ಪೊಲೀಸರು ಪಾಳುಬಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಈ ಅಸ್ಥಿಪಂಜರಗಳು ಸಿಕ್ಕಿವೆ. ಸ್ಥಳಕ್ಕೆ ಡಿವೈಎಸ್‍ಪಿ ಪಿ.ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆಯೇ? ಇಲ್ಲವೇ ಕೊಲೆಯಾಗಿದ್ದಾರೆಯೇ? ಎಂಬುವುದರ ಕುರಿತು ತನಿಖೆಯಿಂದ ತಿಳಿದುಬರಲಿದೆ.

ಅಸ್ಥಿಪಂಜರಗಳನ್ನು ಎಫ್‍ಎಸ್‍ಎಲ್ ಪರೀಕ್ಷೆಗೆ ಕಳಿಸಲು ತೀರ್ಮಾನಿಸಲಾಗಿದೆ. ಪೊಲೀಸರ ಸೂಕ್ತ ತನಿಖೆ ಬಳಿಕವಷ್ಟೇ ಐದು ಅಸ್ಥಿಪಂಜರಗಳ ಹಿನ್ನೆಲೆ ಗೊತ್ತಾಗಲಿದೆ.ಈ ಬಗ್ಗೆ ಜಗನ್ನಾಥರೆಡ್ಡಿ ಸಂಬಂಧಿ ಪವನ್ ಕುಮಾರ್ ಮಾತನಾಡಿ ``ಜಗನ್ನಾಥರೆಡ್ಡಿ (80) ನಿವೃತ್ತ ಇಂಜಿನಿಯರ್ ಆಗಿದ್ದರು. ಸುಮಾರು ವರ್ಷಗಳಿಂದ ಜಗನ್ನಾಥರೆಡ್ಡಿ ಕುಟುಂಬ ನಮ್ಮ ಸಂಪರ್ಕದಲ್ಲಿರಲಿಲ್ಲ.

ನಮ್ಮ ಮನೆಗೆ ಅವರು ಬರುತ್ತಿರಲಿಲ್ಲ, ಅವರ ಮನೆಗೆ ನಾವು ಹೋಗುತ್ತಿರಲಿಲ್ಲ. ಕೆಲ ವರ್ಷಗಳಿಂದ ಜಗನ್ನಾಥರೆಡ್ಡಿ ಮತ್ತು ಕುಟುಂಬದವರು ಕಂಡಿಲ್ಲ. ಜಗನ್ನಾಥರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವ ಅಸ್ಥಿಪಂಜರ ಅವರದ್ದೇ ಆಗಿರಬಹುದು. ಮೂರು ವರ್ಷದ ಹಿಂದೆಯೇ ಅವರು ಮನೆಯಲ್ಲೇ ಮೃತಪಟ್ಟಿರಬಹುದು'' ಎಂದು ಶಂಕಿಸಿದ್ದಾರೆ.

ಬುಧವಾರ ರಂದು ಕಳ್ಳರು ಬಾಗಿಲು ಹೊಡೆದು ಹಾಗೇ ಹೋಗಿರಬಹುದು. ಗುರುವಾರ ಸಂಜೆ ವೇಳೆ ನಾಯಿಗಳು ಮನೆಯೊಳಗೆ ಹೋಗಿವೆ.ನಾಯಿಗಳು ತಲೆ ಬುರುಡೆಗಳನ್ನು ತಂದು ಮನೆ ಬಾಗಿಲ ಬಳಿ ಹಾಕಿರಬಹುದು. ತಲೆ ಬುರುಡೆ ಕಂಡ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು 10ವರ್ಷದಿಂದ ನಾನು ಈ ಮನೆಯಲ್ಲಿ ಯಾರನ್ನೂ ನೋಡಿಲ್ಲ. ಕೃಷ್ಣರೆಡ್ಡಿ (ಬಾಬುರೆಡ್ಡಿ) ಮಾತ್ರ 10 ವರ್ಷದ ಹಿಂದೆ ಆಗಾಗ ಭೇಟಿ ಆಗುತ್ತಿದ್ದರು. ತರಕಾರಿ ಮತ್ತು ಹಾಲು ತರಲು ಹೊರಗೆ ಬರುತ್ತಿದ್ದರು. ಮನೆಯಲ್ಲಿ ವಯಸ್ಸಾದವರು, ನಡೆಯಲಾಗದಷ್ಟು ದಪ್ಪ ಇದ್ದವರು ಇದ್ದರು. ಮನೆ ಮುಂದೆ ರಸ್ತೆ, ಚರಂಡಿ ನಿರ್ಮಾಣ ವೇಳೆಯೂ ಮನೆಯಲ್ಲಿ ಯಾರೂ ಕಂಡುಬಂದಿಲ್ಲ. 10 ವರ್ಷದ ಹಿಂದೆಯೇ ಸಾವಿಗೀಡಾಗಿರಬಹುದು ಎಂದು ವಾಲ್‍ಮನ್ ಪರಶುರಾಮ್ ಶಂಕೆ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು