LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ದೇಹಕ್ಕೆ ಬೇಕಾದ ಸೂಕ್ಷ್ಮ ಪೋಷಕಾಂಶ ಆಯೋಡಿನ್

ದಾವಣಗೆರೆ: ಅಯೋಡಿನ್ ನಮ್ಮ ದೇಹಕ್ಕೆ ಬೇಕಾದಸೂಕ್ಷ್ಮ ಪೋಷಕಾಂಶ. ನಮ್ಮ ದಿನ ನಿತ್ಯದ ಆಹಾರದಲ್ಲಿ ತೆಗೆದುಕೊಳ್ಳಬೇಕು, ಥೈರಾಯ್ಡ್ ಗ್ರಂಥಿಯು ಸಮರ್ಪಕವಾಗಿ ನಿರ್ವಹಣೆ ಮಾಡಬೇಕಾದರೆ ಇದರ ಅವಶ್ಯಕತೆ ಅತಿಮುಖ್ಯವಾಗಿರುತ್ತದೆ ಎಂದು ದಾವಣಗೆರೆ ತಾಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ ಪಿ.ಪಟಗೆ ಹೇಳಿದರು.

ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ವಿಶ್ವ ಆಯೋಡಿನ್ ಕೊರತೆಯ ನ್ಯೂನತೆಗಳನಿಯಂತ್ರಣ ದಿನಾಚರಣೆ ಹಾಗೂ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಯೋಡಿನ್ ಅಂಶವು ಮುಖ್ಯವಾಗಿ ಗರ್ಭದಲ್ಲಿ ಮಗುವಿನ ಸಮರ್ಪಕ ಬೆಳವಣಿಗೆ ಮತ್ತು ಮಾನಸಿಕ, ದೈಹಿಕ ಬೆಳವಣಿಗೆಗೆ ಅತ್ಯಅವಶ್ಯಕ.

ಸಮುದ್ರ ಆಹಾರಗಳಾದ ಮೀನು, ಸಿಗಡಿ ಹಾಗೂ ನೆಲದಲ್ಲಿ ಬೆಳೆಯುವ ಮೂಲಂಗಿ ಇನ್ನಿತರೆ ಬೆಳೆಗಳಲ್ಲಿ ಅಯೋಡಿನ್ ಅಂಶ ದೊರೆಯುತ್ತದೆ ಎಂದರು.ಅಯೋಡಿನ್ ಅಂಶವು ಕಡಿಮೆ ಆದರೆ ಗರ್ಭಿಣಿಯರಲ್ಲಿ ಹುಟ್ಟುವ ಮಗು ದೈಹಿಕ ಮತ್ತು ಮಾನಸಿಕ ವಿಕಲತೆ ಕಂಡು ಬರಬಹುದು. ಮೈ ಇಳಿತ, ಮಕ್ಕಳ ಬೆಳವಣಿಗೆಯಲ್ಲಿ ಕುಂಠಿತ, ಕಿವುಡುತನ, ಮೂಕತನ ಕಂಡು ಬರುತ್ತವೆ. ಅದರಲ್ಲೂ ಬೆಟ್ಟಗುಡ್ಡ, ಇಳಿಜಾರು ಪ್ರದೇಶ, ಅರಣ್ಯ, ನೆರೆಹಾವಳಿಗಳ ಪ್ರದೇಶದಲ್ಲಿ ಆಯೋಡಿನ್ ಅಂಶವು ಕಡಿಮೆ ಇರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿ ಕಾರಿಗಳಾದ ಹೆಚ್.ಉಮಾಪತಿ, ಆರ್.ಲೋಕೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಎಸ್.ವೆಂಕಟಾಚಲ ಕುಮಾರ, ಪಿ.ವಿ.ರವಿ.ಪಿ ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು