LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಐಪಿಎಲ್ 2024: ಮೊದಲ ಪ್ಲೇ ಆಫ್ ಪಂದ್ಯಕ್ಕೆ ಮಳೆ ಬರಬಹುದೇ..?

ಅಹಮ್ಮದಾಬಾದ್: ಐಪಿಎಲ್ 2024 ರಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೆಕೆಆರ್ ನಡುವೆ ಮೊದಲ ಪ್ಲೇ ಆಫ್ ಪಂದ್ಯ ನಡೆಯಲಿದೆ. ಇಂದಿನ ಪಂದ್ಯಕ್ಕೆ ಹವಾಮಾನ ಹೇಗಿರಲಿದೆ ಎಂಬ ವರದಿ ಇಲ್ಲಿದೆ. ದಕ್ಷಿಣ ಭಾರತದಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಈ ಐಪಿಎಲ್ ನಲ್ಲಿ ಒಟ್ಟು ಎರಡು ಪಂದ್ಯಗಳು ಮಳೆಗೆ ಆಹುತಿಯಾಗಿವೆ.

ಲೀಗ್ ಪಂದ್ಯದಲ್ಲಿ ಮಳೆ ಬಂದು ಕೆಲವು ತಂಡಗಳ ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದ್ದು ನಿಜ.ಆದರೆ ಇದೀಗ ಪ್ಲೇ ಆಫ್ ಹಂತದಲ್ಲಿ ಮಳೆ ಬರುವ ಸಾಧ್ಯತೆ ಬಗ್ಗೆ ಹವಾಮಾನ ವರದಿ ಹೀಗಿದೆ.ಉತ್ತರ ಭಾರತಕ್ಕೆ ಇನ್ನೂ ಮಳೆ ಅಷ್ಟಾಗಿ ಬಂದಿಲ್ಲ. ಅದರಲ್ಲೂ ಅಹಮ್ಮದಾಬಾದ್ ನಲ್ಲಿ ತಾಪಮಾನ 40 ಡಿಗ್ರಿಗಿಂತಲೂ ಅಧಿಕವಿದೆ. ಇಂದೂ ಅದೇ ತಾಪಮಾನ ಮುಂದುವರಿಯಲಿದೆ.

ಬಹುತೇಕ ದಿನವಿಡೀ ಸುಡು ಬಿಸಿಲು ಇರಲಿದ್ದು, ರಾತ್ರಿಯೂ ಮಳೆ ಬಿಡಿ, ಮೋಡದ ಲಕ್ಷಣವೂ ಇಲ್ಲ. ಹೀಗಾಗಿ ಇಂದು ಮಳೆ ಬರುವ ಸಾಧ್ಯತೆಗಳು ಕಡಿಮೆ. ಇದು ರೋಚಕ ಹಣಾಹಣಿಯನ್ನು ಎದುರು ನೋಡುತ್ತಿರುವ ಪ್ರೇಕ್ಷಕರಿಗೆ ಸಮಾಧಾನಕರ ಸಂಗತಿಯಾಗಿದೆ. ಇಂದು ಮಾತ್ರವಲ್ಲ, ನಾಳೆ ಆರ್ ಸಿಬಿ ಮತ್ತು ರಾಜಸ್ಥಾನ್ ನಡುವೆ ನಡೆಯಲಿರುವ ಪಂದ್ಯಕ್ಕೂ ಮಳೆ ಭೀತಿಯಿಲ್ಲ. ಹೀಗಾಗಿ ಅಂತಿಮ ಹಂತದ ಪಂದ್ಯಗಳು ನಿರಾತಂಕವಾಗಿ ಸಾಗಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು