LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕೊಹ್ಲಿ ದಾಖಲೆ ಸರಿಗಟ್ಟಿದ ಜೈಸ್ವಾಲ್!

ಯಶಸ್ವಿ ಜೈಸ್ವಾಲ್ ಅವರು ಕಿಂಗ್ ಕೊಹ್ಲಿಯ ದಾಖಲೆಯನ್ನೇ ಸರಿಗಟ್ಟಿದ್ದಾರೆ. ರಾಜ್‍ಕೋಟ್‍ನಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ರಾಜನಾಗಿ ಮೆರೆದಿದ್ದಾರೆ. ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 3ನೇ ಟೆಸ್ಟ್‍ನಲ್ಲಿ ಯಶಸ್ವಿ ಡಬಲ್ ಸೆಂಚುರಿ ಸಿಡಿಸುವ ಮೂಲಕ ಜೈಸ್ವಾಲ್ ಅಪರೂಪದ ದಾಖಲೆಯನ್ನೂ ಕೂಡ ಬರೆದಿದ್ದಾರೆ.

ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಬಹು ಅಪರೂಪದ ರೆಕಾರ್ಡ್ ಅನ್ನು ಸರಿಗಟ್ಟುವ ಮೂಲಕ ಎಂಬುದೇ ವಿಶೇಷ.ಈ ಪಂದ್ಯದ ದ್ವಿತೀಯ ಇನಿಂಗ್ಸ್‍ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಯಶಸ್ವಿ ಜೈಸ್ವಾಲ್ 236 ಎಸೆತಗಳಲ್ಲಿ 12 ಭರ್ಜರಿ ಸಿಕ್ಸ್ ಹಾಗೂ 14 ಫೋರ್‍ಗಳೊಂದಿಗೆ ಅಜೇಯ 214 ರನ್ ಬಾರಿಸಿದರು. ಇದರೊಂದಿಗೆ ಟೆಸ್ಟ್ ಸರಣಿಯೊಂದರಲ್ಲಿ ಟೀಮ್ ಇಂಡಿಯಾ ಪರ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.

ಈ ಮೂಲಕ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದರು. ಕಿಂಗ್ ಕೊಹ್ಲಿ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಬಾರಿಸಿ ಈ ಡಬಲ್ ಟನ್‍ಗಳ ವಿಶೇಷ ದಾಖಲೆ ಬರೆದಿದ್ದರು. ಇದೀಗ ಏಳು ವರ್ಷಗಳ ಬಳಿಕ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿ ಜೈಸ್ವಾಲ್
ಯಶಸ್ವಿ ಯಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು