LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ಜಲ ಜೀವನ್ ಯೋಜನೆ ಜೀವ ಹಿಂಡುವ ಯೋಜನೆಯಾಗಿದೆ'

ದೊಡ್ಡಬಳ್ಳಾಪುರ: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಜಾನುವಾರುಗಳಿಗಾಗಿ ಕುಡಿಯುವ ನೀರಿಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರಿಗೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಮನವಿ ಸಲ್ಲಿಸಿದರು.

ತಾಲ್ಲೂಕಿನ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯಿತಿಗಳ ಕೊಳವೆ ಬಾವಿ, ಕೆರೆ ಸೇರಿದಂತೆ ಶುದ್ಧ ಕುಡಿಯುವ ಘಟಕದ ನೀರು ಸಹ ಕಲುಷಿತಗೊಂಡಿದ್ದು ಪರ್ಯಾಯ ನೀರಿನ ವ್ಯವಸ್ಥೆಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡಿ ಎಂದು ಮನವಿ ಮಾಡಿದರು.

ಈ ವೇಳೆ ಮಾತನಾಡಿದ ವೇದಿಕೆಯ ಮುಖಂಡ ವಸಂತ್ ಕುಮಾರ್ ಅವರು 2021ರ ಕೊಳವೆ ಬಾವಿಗಳ ನೀರಿನ ಪರೀಕ್ಷಾ ವರದಿಯಲ್ಲಿ 18 ಕೊಳವೆ ಬಾವಿಗಳಲ್ಲಿ 07 ಕೊಳವೆ ಬಾವಿಗಳು ಹಾಗೂ 2023 ನೇ ಇಸವಿಯಲ್ಲಿ 18 ಕೊಳವೆ ಬಾವಿಗಳಲ್ಲಿ 17 ಕೊಳವೆ ಬಾವಿಗಳಲ್ಲಿನ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ. ಇಂದು ಕುಡಿಯಲು ಜಕ್ಕಲಮಡಗು ನೀರನ್ನು ಕೊಡುತ್ತಿದ್ದಾರೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕಲುಷಿತಗೊಂಡಿರುವ ನೀರನ್ನು ನಮಗೆ ಮತ್ತು ದನಕರುಗಳಿಗೆ ಉಪಯೋಗಿಸಲು ಕೊಡುತ್ತಿದೆ, ಜಲ ಜೀವನ್ ಯೋಜನೆಯು ಶುದ್ಧ ಕುಡಿಯುವ ನೀರು ಕೊಡಬೇಕೆಂದು ಹೇಳುತ್ತದೆ ಆದರೆ ಪ್ರತಿ ಮನೆಗೆ ಜೀವಜಲ ಎಂಬ ಯೋಜನೆ ನಮ್ಮ ಗ್ರಾಮಗಳ ಪಾಲಿಗೆ ಜೀವ ಹಿಂಡವಂತೆ ಮಾಡುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಈ ಹಿಂದೆ ಅಧಿಕಾರಿಗಳ ತಂಡ ಪಕ್ಕದ ಪಂಚಾಯಿತಿಯ ನರಸಯ್ಯನ ಅಗ್ರಹಾರದಿಂದ ನೀರು ತಂದು ಕೊಡುತ್ತೇವೆ ಎಂದು ಕೆರೆ ಹೋರಾಟಗಾರರಿಗೆ ಭರವಸೆ ನೀಡಿದ್ದರು. ಆದರೆ ನರಸಯ್ಯನ ಅಗ್ರಹಾರದಿಂದ ನೀರು ತರಲು ಯಾವುದೇ ಕ್ರಮ ತೆಗೆದುಕೊಳ್ಳದೇ ಕಲುಷಿತಗೊಂಡಿರುವ ನೀರನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ನಮ್ಮ ಪಂಚಾಯಿತಿಗಳ ಅಂತರ್ಜಲವು ಅಧಿಕ ಲೋಹಗಳಾದ ಸೀಸ, ಲೇಟ್, ಕ್ರೋಮಿಯಂ ಸೇರಿದಂತೆ ಅನೇಕ ವಿಷಯುಕ್ತ ರಾಸಾಯನಿಕಗಳು ಇರುವುದು ಕಂಡು ಬಂದಿದೆ, ಜನಗಳ ಆರೋಗ್ಯ ದೃಷ್ಟಿಯಿಂದ ಜಾನುವಾರು, ಪ್ರಾಣಿ, ಪಕ್ಷಿ, ಜೀವ ಸಂಕುಲಗಳ ಉಳಿವಿಗಾಗಿ ಎರಡೂ ಗ್ರಾಮ ಪಂಚಾಯತಿಯ ಪ್ರತಿಯೊಂದು ಮನೆಗೂ ಕುಡಿಯುವ ನೀರಿನ "ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡುವ ಮೂಲಕ ಶುದ್ಧ ಕುಡಿಯುವ ನೀರನ್ನು ಕೊಡಬೇಕೆಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದೊಡ್ಡತುಮಕೂರು ಮುಖಂಡ ರಾಮಕೃಷ್ಣ ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು