LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜಮೀರ್ ವಿರುದ್ಧ ಎಸ್.ಎಸ್. ಮಲ್ಲಿಕಾರ್ಜುನ್ ಕಿಡಿ

ನವದೆಹಲಿ: ಜಮೀರ್ ಅವರು ಮಾತನಾಡಿದ ಆಡಿಯೋ ಈಗ ಹೊರಬಂದಿದೆ. ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ ಎಂದು ಕಾಂಗ್ರೆಸ್ ನಾಯಕ ಎಸ್.ಎಸ್ ಮಲ್ಲಿಕಾರ್ಜುನ್ ಕಿಡಿಕಾರಿದ್ದಾರೆ.ದೆಹಲಿಯಲ್ಲಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಈ ವೇಳೆ, ದಾವಣಗೆರೆ ಉಪಚುನಾವಣೆಯ ವಿಚಾರವಾಗಿ ಜಮೀರ್ ಹಾಗೂ ಸಿರಾಜ್ ಮಾತನಾಡಿದ್ದ ಆಡಿಯೋ ವೈರಲ್ ಆದ ಬಗ್ಗೆ ಪ್ರತಿಕ್ರಿಯಿಸಿದರು. ಜಮೀರ್ ಅಹಮದ್ ಮಾತನಾಡಿದ್ದು ಆಡಿಯೋ ಮೂಲಕ ಹೊರ ಬಂದಿದೆ. ಹೈಕಮಾಂಡ್ ನಾಯಕರು ಎಲ್ಲವನ್ನೂ ನೋಡಿದ್ದಾರೆ. ಈ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ ಎಂದರು. ನಾನು ಅವರನ್ನು ಉಚ್ಛಾಟನೆ ಮಾಡಿ ಎನ್ನುವಂತ ಕೆಳಮಟ್ಟದ ರಾಜಕೀಯ ಮಾಡಲ್ಲ. ಹೈಕಮಾಂಡ್ ನಾಯಕರು ಈ ಬಗ್ಗೆ ತಿರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST