LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೆಂಬಾ ಬವುಮಾಗೆ ಹೀಯಾಳಿಸಿದ್ರಾ ಜಸ್ಪ್ರೀತ್ ಬುಮ್ರಾ-ರಿಷಬ್ ಪಂತ್?

ಭಾರತೀಯ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಮಾರಕ ವೇಗದ ಬೌಲಿಂಗ್ ಗೆ ತತ್ತರಿಸಿದ ಟೆಸ್ಟ್ ವಿಶ್ವಚಾಂಪಿಯನ್ ದಕ್ಷಿಣ ಆಫ್ರಿಕಾ ತಂಡ ಪ್ರಥಮ ಟೆಸ್ಟ್ ನ ಪ್ರಧಮ ಇನ್ನಿಂಗ್ಸ್ ನಲ್ಲಿ ಸಾಧಾರಣ ಮೊತ್ತಕ್ಕೆ ಸರ್ವಪತನ ಕಂಡಿದೆ. ಆದರೆ ಬುಮ್ರಾ ಅವರ ಬೌಲಿಂಗ್ ಪ್ರದರ್ಶನಕ್ಕಿಂತ ಹೆಚ್ಚಾಗಿ, ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾ ಅವರನ್ನು ಕಟಕಿಯಾಡಿರುವ ಸಂಗತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ ನಲ್ಲಿ ಶುಕ್ರವಾರ ಪ್ರಾರಂಭ ಆಗಿರುವ ಪ್ರಥಮ ಟೆಸ್ಟ್
ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಬ್ಯಾಟಿಂಗ್ ಗೆ ಇಳಿಸಿತು. ವೇಗಿಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರ ಬಿಗು ದಾಳಿಗೆ ಸಿಲುಕಿದ ದಕ್ಷಿಣ ಆಫ್ರಿಕಾ ತಂಡ ೫೫ ಓವರ್ ಗಳಲ್ಲಿ ೧೫೯ಕ್ಕೆ ಆಲೌಟ್ ಆಯಿತು.

ದಕ್ಷಿಣ ಆಫ್ರಿಕಾದ ಆರಂಭಿಕರಾದ ಐಡನ್ ಮಾರ್ಕಂ ಮತ್ತು ರಿಯಾನ್ ರಿಕೆಲ್ಟನ್ ಅವರು ಮೊದಲ ವಿಕೆಟ್ ಗೆ ೫೭ ರನ್ ಗಳ ಜೊತೆಯಾಟವಾಡಿದರು. ಈ ವೇಳೆ ದಕ್ಷಿಣ ಆಫ್ರಿಕಾ
ಬೃಹತ್ ಮೊತ್ತವೊಂದನ್ನು ಪೇರಿಸುವ ಸೂಚನೆ ನೀಡಿದ್ದರು. ಆರಂಭಿಕರಾದ ಮಾರ್ಕ್ಂ(೩೧), ರಿಕಲ್ಟನ್(೨೩) ಮತ್ತು ನಾಯಕ ಬುವಾಮಾ(೩) ಅವರ ವಿಕೆಟ್ ಉರುಳಿಸಿದರು.
ಈ ಆಘಾತದಿಂದ ದಕ್ಷಿಣ ಆಫ್ರಿಕಾ ತಂಡ ಚೇತರಿಸಿಕೊಳ್ಳಲೇ ಇಲ್ಲ. ಮಧ್ಯಮ ಕ್ರಮಾಂಕದಲ್ಲಿ ಜಾರ್ಝಿ(೨೪), ಸ್ಟಬ್ಸ್ (೧೫), ವೆರೆನ್ನೆ(೧೬) ರನ್ ಗಳಿಸಿ ಕೆಲಕಾಲ ಕ್ರೀಸಿನಲ್ಲಿ ತಳವೂರಲು ಪ್ರಯತ್ನಿಸಿದರಾದರೂ ತಂಡವನ್ನು ದೊಡ್ಡ ಮೊತ್ತದೆಡೆಗೆ ಕೊಂಡೊಯ್ಯುವಲ್ಲಿ ಸಫಲರಾಗಲಿಲ್ಲ. ಹೀಗಾಗಿ ತಂಡ ೧೫೯ ರನ್ ಗೆ ಆಲೌಟ್ ಆಯಿತು. ಜಸ್ಪ್ರೀತ್ ಬುಮ್ರಾ ೫ ವಿಕೆಟ್ ಪಡೆದರೆ, ಸಿರಾಜ್ ಮತ್ತು ಕುಲ್ದೀಪ್ ಯಾದವ್ ತಲಾ ೨ ವಿಕೆಟ್ ಗಳಿಸಿದರು. ಮತ್ತೊಂದು ವಿಕೆಟ್ ಅಕ್ಷರ್ ಪಟೇಲ್ ಪಾಲಾಯಿತು.

ಟೆಂಬಾ ಬವುಮಾ ಅವರನ್ನು ಬುಮ್ರಾ ಅವರು ಎಲ್'ಬಿ' (ಲೆಗ್ ಬಿಫೋರ್ ವಿಕೆಟ್) ಔಟ್ ಮಾಡಿದ್ದಾಗಿ ಅಂಪೈರ್‌ಗೆ ಮನವಿ ಮಾಡಿದರು. ಆದರೆ ಅಂಪೈರ್ ಔಟ್ ನೀಡಲಿಲ್ಲ. ಆಗ ಬುಮ್ರಾ
ಮತ್ತು ವಿಕೆಟ್ ಕೀಪರ್ ರಿಷಬ್ ಪಂತ್ ನಡುವೆ ಡಿಆರ್‌ಎಸ್ ತೆಗೆದುಕೊಳ್ಳಬೇಕೇ ಬೇಡವೇ ಎಂಬ ಬಗ್ಗೆ ಚರ್ಚೆ ನಡೆಯಿತು. ಈ ಚರ್ಚೆಯ ವೇಳೆ ಬುಮ್ರಾ ಅಥವಾ ಪಂತ್
ಅವರಲ್ಲಿ ಯಾರೋ ಒಬ್ಬರು ಬವುಮಾ ಅವರನ್ನು "ಬೌನಾ" (ಕುಬ್ಜ) ಎಂದು ಕರೆದಿದ್ದಾರೆ ಎನ್ನಲಾಗಿದೆ. ಈ ಮಾತು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು