LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಬಿಗ್‌ಬಾಸ್ ಶೋಗೆ ಬೀಗ ಹಿನ್ನೆಲೆ ಡಿಸಿಎಂ ವಿರುದ್ಧ ಜೆಡಿಎಸ್ ವಾಗ್ದಾಳಿ"

ಬೆಂಗಳೂರು: ಬಿಗ್‌ಬಾಸ್ ಶೋ ಬಂದ್ ಮಾಡಿಸಿರುವ ಸರ್ಕಾರಕ್ಕೆ ಬೆಂಗಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸುತ್ತೀರಾ ಯಾವಾಗ ಕಾಂಗ್ರೆಸ್ ಸರ್ಕಾರದ ೬೦% ಕಮಿಷನ್ ದಂಧೆಗೆ ಬೀಗ ಹಾಕ್ತೀರಾ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ. ಈ ಸಂಬAಧ ಎಕ್ಸ್ನಲ್ಲಿ ಟ್ವೀಟ್  ಮಾಡಿರುವ ಜೆಡಿಎಸ್, ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್‌ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಅವರೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ ರಾಜ್ಯದ ಜನರ ತೆರಿಗೆಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ ಕಾಂಗ್ರೆಸ್ ಸರ್ಕಾರದ ೬೦% ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ ಎಂದಿದ್ದಾರೆ.

ಕಾAಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ ಕೈಲಾಗದವರು ಮೈಪರಚಿ ಕೊಂಡAತೆ ಇದೆ ಕಾಂಗ್ರೆಸ್
ಸರ್ಕಾರದ ದುರಾಡಳಿತ ಎಂದು ಕಿಡಿಕಾರಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು