LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ವಾಯುವಿಹಾರಿಗಳಲ್ಲಿ ಜೋಶಿ ಮತಯಾಚನೆ

ಹುಬ್ಬಳ್ಳಿ: ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರ ಚಿತ್ತ ಈಗ ವಾಯು ವಿಹಾರಿಗಳತ್ತ !ಚುನಾವಣೆಗಿನ್ನು ಕೆಲವೇ ದಿನಗಳು ಉಳಿದಿದ್ದು, ಸಚಿವರು ಪ್ರಚಾರದ ಆಯಾಮವನ್ನು ವಿಸ್ತರಿಸತೊಡಗಿದ್ದಾರೆ. ಈಗ ಬೆಳಕು ಹರಿಯುತ್ತಲೇ ಮೊದಲು ಒಂದು ಸುತ್ತು ಹುಬ್ಬಳ್ಳಿ-ಧಾರವಾಡದ ಪಾರ್ಕ್ ಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.

ಬಿರು ಬಿಸಿಲು ಎಂಬ ಕಾರಣಕ್ಕೆ ಚುನಾವಣಾ ಪ್ರಚಾರಕ್ಕೆ ತೊಡಕಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆಯೇ ಹೆಚ್ಚು ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ.
ಬೆಳಗ್ಗೆ ಮತ್ತು ರಾತ್ರಿ ನಗರ ಪ್ರದೇಶದಲ್ಲಿ ಹಾಗೂ ಸಂಜೆ ವಿಧಾನಸಭಾ ಕ್ಷೇತ್ರವಾರು ವಿವಿಧ ಹಳ್ಳಿಗಳಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ.ಅಂತೆಯೇ, ನಿತ್ಯ ಬೆಳ ಬೆಳಗ್ಗೆಯೇ ಸಚಿವ ಜೋಶಿ ಅವರು ವಿವಿಧ ಪಾರ್ಕ್, ಉದ್ಯಾನವನಗಳಲ್ಲಿ ವಾಯು ವಿಹಾರಿಗಳ ಬಳಿ ತಲುಪುತ್ತಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯ ನೃಪತುಂಗಾ ಬೆಟ್ಟದಲ್ಲಿ ವಾಯು ವಿಹಾರಕ್ಕೆಂದು ಬಂದವರನ್ನು ಭೇಟಿ ಮಾಡಿ ಮತ ಕೋರಿದರು.

ಭಾರತವನ್ನು ವಿಶ್ವ ಗುರುವಾಗಿಸಲು ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿಸಿ, ಇದಕ್ಕಾಗಿ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಸಂತೋಷ ಚೌಹಾನ್, ರೂಪಾ.ಡಿ.ಶೆಟ್ಟಿ, ಚನ್ನು ಹೊಸಮನಿ, ಸಿದ್ದು ಮೊಗಳಿಶೆಟ್ಟರ್, ಶಿವಯ್ಯ ಹಿರೇಮಠ, ಈಶ್ವರಗೌಡ ಪಾಟೀಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು