LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯ ಸರ್ಕಾರದಿಂದ ಶರವೇಗದ ತುಷ್ಟೀಕರಣ: ಜೋಶಿ ಕಿಡಿ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಕೋಗಿಲು ಅತಿಕ್ರಮಣದಾರರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ವ್ಯವಸ್ಥೆಗೆ ಮುಂದಾಗಿರುವುದು "ತುಷ್ಟೀಕರಣದ ಶರವೇಗ" ವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.
ರಾಜ್ಯದಲ್ಲಿ ರೈತರು, ಬೆಳೆಹಾನಿ ಸಂತ್ರಸ್ತರು ಮತ್ತು ಇತರೆ ನಿರಾಶ್ರಿತರು ಪರ್ಯಾಯ ವ್ಯವಸ್ಥೆ ಹಾಗೂ ಪರಿ
ಹಾರಕ್ಕಾಗಿ ವರ್ಷಾನುಗಟ್ಟಲೆ ಕಾಯುತ್ತಿದ್ದಾರೆ. ಗೃಹ ಲಕ್ಷಿ÷್ಮ ಫಲಾನುಭವಿಗಳೂ ಗ್ಯಾರೆಂಟಿ ನಿಧಿಗಾಗಿ ಕಾಯುತ್ತಿದ್ದಾರೆ. ಆದರೆ, ಸರ್ಕಾರ ಕೋಗಿಲು ಅತಿಕ್ರಮಣದಾರರಿಗೆ ಮಾತ್ರ ಕ್ಷಣಾರ್ಧದಲ್ಲಿ ಪರಿಹಾರ, ಪರ್ಯಾಯ ವ್ಯವಸ್ಥೆಗೆ ಮುಂದಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಮಿತಿಮೀರಿದ "ಧರ್ಮ ಓಲೈಕೆ" ಆಡಳಿತವನ್ನು ಪ್ರದರ್ಶಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೇವಲ ಒಂದು ಧರ್ಮದ ಓಲೈಕೆಯಲ್ಲೇ ಮುಳುಗಿದೆ. ತುಷ್ಟೀಕರಣಕ್ಕಾಗಿ ಶರವೇಗದಲ್ಲಿ ಪರಿಹಾರ ಕ್ರಮ ಕೈಗೊಂಡಿದೆ. ಅಲ್ಲದೇ, ಔಪಚಾರಿಕ ಪರಿಹಾರ ನೀಡಲು ಮುಂದಾಗಿದ್ದು, ಅತಿ ಬೇಸರದ ಸಂಗತಿ ಎಂದು ಜೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬರ, ಪ್ರವಾಹದಂತಹ ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ಪರಿಹಾರ ಪಡೆಯಲು ರಾಜ್ಯದ ಸಂತ್ರಸ್ತರು ವರ್ಷಗಳಿಂದ ಕಾಯುತ್ತಿದ್ದರು.
ಆದರೆ, ರಾಜ್ಯ ಸರ್ಕಾರ ಕೋಗಿಲು ಅತಿಕ್ರಮಣದಾರರಿಗೆ ಕೇವಲ ಎರಡೇ ಎರಡು ದಿನಗಳಲ್ಲಿ ಪರಿಹಾರ ಒದಗಿಸಿ ತನ್ನ ಧರ್ಮಾಧಾರಿತ ಆಡಳಿತವನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ಪಕ್ಕದ ರಾಜ್ಯದ ಕಾಂಗ್ರೆಸ್ ನಾಯಕರೊಬ್ಬರು ಕರೆ ಮಾಡಿ, ತಕ್ಷಣ ಪರಿಹಾರ ಕ್ರಮಕ್ಕೆ ನಿರ್ದೇಶಿಸಿದ್ದು, ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷದ ನಾಯಕತ್ವದ ಕೈಗೊಂಬೆಯಾಗಿ ವರ್ತಿಸುತ್ತಿದೆ. ತನ್ನ ಆದ್ಯ ಕರ್ತವ್ಯ ಮತ್ತು ಕಾನೂನಿನ ಪರಿಮಿತಿಯ ಜವಾಬ್ದಾರಿಯನ್ನು ಗಾಳಿಗೆ ತೂರಿ, ತುಷ್ಟೀಕರಣ ರಾಜಕಾರಣದ ಪರಮಾವಧಿಯನ್ನು ಪ್ರದರ್ಶಿಸಿದೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.
"ಈ ಸರ್ಕಾರದ ಆಡಳಿತದಲ್ಲಿ ರೈತರು, ನಿಜವಾದ ಸಂತ್ರರು, ಗೃಹಲಕ್ಷಿ÷್ಮ ಫಲಾನುಭವಿಗಳು ಕಾಯಬೇಕಾದ ಪರಿಸ್ಥಿತಿ ಇದೆಯೇ ವಿನಃ ಅಕ್ರಮವಾಗಿ ಅತಿಕ್ರಮಿಸಿದವರು ಕಾಯುವಂತಿಲ್ಲ" ಎಂದು ಜೋಶಿ ಚಾಟಿ ಬೀಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು