LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಸಮಾಜ ಪರಿವರ್ತನೆಯಲ್ಲಿ ಪತ್ರಿಕೋದ್ಯಮಕ್ಕೆ ದೊಡ್ಡ ಶಕ್ತಿ ಇದೆ

ಡಿವಿಜಿ ಜಯಂತ್ಯೋತ್ಸವದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಡಾ.ಕೋಡಿರಂಗಪ್ಪ ಅಭಿಮತ
ಚಿಕ್ಕಬಳ್ಳಾಪುರ: ಮಾಧ್ಯಮ, ಸಾಹಿತ್ಯ, ಸಂಸ್ಕೃತಿ ಹಾಗೂ ಶಿಕ್ಷಣ ನಾಲ್ಕು ಕೂಡ ಒಂದಕ್ಕೊAದು ಪೂರಕವಾಗಿ ಗಟ್ಟಿಯಾಗಿ, ಪೋಷಣೆಯಾಗಿ ಅಂತರ್‌ಶಿಸ್ತೀಯವಾಗಿ ಬೆಳೆದರೆ ಸಮಾಜದಲ್ಲಿ ಒಂದು ದೊಡ್ಡ ಬದಲಾವಣೆ ತರಲು ಸಾಧ್ಯವಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಕೋಡಿರಂಗಪ್ಪ ಅಭಿಪ್ರಾಯಪಟ್ಟರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸಾಹಿತಿ ಡಿ.ವಿ.ಗುಂಡಪ್ಪನವರ ಜಯಂತ್ಯೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಇಂದಿಗೂ ಶೇ.70 ರಷ್ಟು ಸಾಮಾನ್ಯ ಜನರಿದ್ದಾರೆ. ಬಡವರು, ಕೂಲಿ ಕಾರ್ಮಿಕರು, ಶೋಷಿತರು, ಮಹಿಳೆಯರು ಇದ್ದು ಅವರಿಗೆ ಮಾಧ್ಯಮಗಳು ನೈತಿಕ ಶಕ್ತಿಯ ಜೊತೆಗೆ ಅವರ ಸಮಸ್ಯೆ, ಸವಾಲುಗಳನ್ನು ಪ್ರತಿಬಿಂಸುವ ದೊಡ್ಡ ಸಾಮಾಜಿಕ ಹೊಣೆಗಾರಿಕೆಯನ್ನು ಮಾಧ್ಯಮಗಳು ಪ್ರದರ್ಶಿಸಿ ಅವರ ಪರ ನಿಲ್ಲುವ ಕೆಲಸವನ್ನು ಬದ್ಧತೆ ಹಾಗೂ ಪ್ರಾಮಾಣಿಕತೆಯಿಂದ ಮಾಡಬೇಕೆಂದರು. ಸಮಾಜದ ಪರಿವರ್ತನೆಯಲ್ಲಿ ನಿಂತಿಕೊAಡಿರುವ ದೊಡ್ಡ ಶಕ್ತಿ ಇವತ್ತು ಪತ್ರಿಕೋದ್ಯಮ. ಬಡತನಲ್ಲಿ ಹುಟ್ಟಿ ಬೆಳೆದರೂ ಡಿ.ವಿ.ಗುಂಡಪ್ಪನವರು ತಮ್ಮ ಬರಹಗಳ ಮೂಲಕ ಕನ್ನಡದ ಪತ್ರಿಕೋದ್ಯಮಕ್ಕೆ ಹೊಸ ಆಯಮಾವನ್ನು ಕೊಟ್ಟು ಮಹಾನ್ ಆದರ್ಶ ವ್ಯಕ್ತಿಯಾಗಿದ್ದಾರೆ. ಅವರ ವಿಚಾರಾಧರೆಗಳನ್ನು ಇಂದಿನ ಯವ ಪೀಳಿಗೆಯ ಪತ್ರಕರ್ತರು ತಮ್ಮ ವೃತ್ತಿ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ತೀರಾ ಅಗತ್ಯ ಎಂದ ಅವರು, ಡಿ.ವಿ.ಗುಂಡಪ್ಪ ಅವರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬರಿಗೂ ದೊಡ್ಡ ಆದರ್ಶ ವ್ಯಕ್ತಿ. ಅವರ ಮುಂದಾಳತ್ವದಲ್ಲಿ ರಾಜ್ಯದ ಕಾರ್ಯನಿರತ ಪತ್ರಕರ್ತರ ಸಂಘ ಸ್ಥಾಪನೆ ಆಗಿರುವುದು ಹೆಮ್ಮೆಯ ಸಂಗತಿ ಎಂದರು.
ಸಂಖ್ಯೆ ನೋಡಿ ಯಾವುದಕ್ಕೂ ನಾವು ಭ್ರಮನಿರಸನಗೊಳ್ಳಬಾರದು. ವಿಚಾರವಂತಿಕೆ ಬಹಳ ಮುಖ್ಯವಾಗುತ್ತದೆ. ಜಗತ್ತಿನ ದೊಡ್ಡ ದೊಡ್ಡ ಕ್ರಾಂತಿಗಳು ಕೂಡ ಸಣ್ಣ ಪ್ರಮಾಣದಲ್ಲಿ ಆರಂಭವಾಗಿದ್ದು, ಇವತ್ತಿಗೂ ಕೂಡ ಸಮಾಜದಲ್ಲಿ ನ್ಯಾಯಾಂಗ ಹಾಗೂ ಪತ್ರಿಕಾರಂಗದ ಮೇಲೆ ಜನರು ನಂಬಿಕೆ, ವಿಶ್ವಾಸವನ್ನು ಹೊಂದಿದ್ದಾರೆ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಸಮಾಜಮುಖಿಯಾಗಿ ಪತ್ರಕರ್ತರ ಬೆಳೆಯಬೇಕಿದೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿ.ರವಿಕುಮಾರ್ ಮಾತನಾಡಿದರು. ವೇದಿಕೆಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ಖಜಾಂಚಿ ಬಿ.ಕೆ.ಮುದ್ದಕೃಷ್ಣ, ಜಿಲ್ಲಾ ಕಾರ್ಯದರ್ಶಿಗಳಾದ ಎಂ.ಆನAದ್, ಗುಡಿಬಂಡೆ ಮಂಜುನಾಥ, ಲೇಖಕರಾದ ಸರ್ದಾರ್‌ಚಾಂದ್‌ಪಾಷ, ಹಿರಿಯ ಪತ್ರಕರ್ತರಾದ ಟಿ.ಎಸ್.ನಾಗೇಂದ್ರಬಾಬು, ಜಿಲ್ಲಾ ಕಾರ್ಯಕಾರಣಿ ಸಮಿತಿ ಸದಸ್ಯರಾದ ಜಿಲಾನಿ, ಕೆ.ಪಿ.ನವಮೋಹನ್, ಎನ್.ಚಂದ್ರೇಗೌಡ, ಗೋವರ್ಧನ್, ಹಿರಿಯ ಪತ್ರಕರ್ತರಾದ ಸೋ.ಸು.ನಾಗೇಂದ್ರನಾಥ್, ಶಿಡ್ಲಘಟ್ಟ ಕಸಾಪ ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಜಿ.ಸಿ.ವೆಂಕಟರವಣಪ್ಪ,ರೈತ ಮುಂಡ ನರಸಿಂಹಯ್ಯ ಸೇರಿದಂತೆ ಜಿಲ್ಲಾ ಕೇಂದ್ರದ ಮಾಧ್ಯಮ ಸ್ನೇಹಿತರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು